'ಮೋದಿಯೇ ಬಾಸ್' ಎಂದ ಆಸ್ಟ್ರೇಲಿಯಾ ಪ್ರಧಾನಿ, ಚುನಾವಣಾ ಆಯೋಗದಿಂದ 193 ಚಿಹ್ನೆಗಳ ಪಟ್ಟಿ ಬಿಡುಗಡೆ, ಪ್ರಮಾಣ ವಚನ ಸ್ವೀಕರಿಸದ 16 ಶಾಸಕರು, ಸಿಎಂಗೆ ಸಾಲು ಮರದ ತಿಮ್ಮಕ್ಕ ಶುಭ ಹಾರೈಕೆ, ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ, ದೆಹಲಿ ಸಿಎಂ ಕೇಜ್ರಿವಾಲ್‌ಗೆ ಸಮನ್ಸ್ ಸೇರಿದಂತೆ ಈ ದಿನ ಗಮನ ಸೆಳೆದ ಪ್ರಮುಖ 10 ಸುದ್ದಿಗಳು ಇಲ್ಲಿವೆ.
ಸಿಡ್ನಿಯ ಕ್ಯುಡೋಸ್ ಬ್ಯಾಂಕ್ ಅರೆನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಆಂಥೋನಿ ಅಲ್ಬನೀಸ್ ಅವರೊಂದಿಗೆ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ವಲಸಿಗ ಭಾರತೀಯರನ್ನು ಉದ್ದೇಶಿ ಮಾತನಾಡಿದರು. ಕಾರ್ಯಕ್ರಮಕ್ಕೆ ಮೋದಿಯವರನ್ನು ಸ್ವಾಗತಿಸಿದ ಅಲ್ಬನೀಸ್, 'ಪ್ರಧಾನಿ ಮೋದಿಯೇ ಬಾಸ್' ಎಂದು ಹೇಳಿದ್ದಾರೆ.
ಮಾನ್ಯತೆ ಪಡೆಯದ ಪಕ್ಷಗಳ ಅಭ್ಯರ್ಥಿಗಳು ಮತ್ತು ಪಕ್ಷೇತರ ಅಭ್ಯರ್ಥಿಗಳಿಗೆ ಚುನಾವಣೆಗಳಲ್ಲಿ ಸ್ಪರ್ಧೆಗೆ ನೀಡಲು ಒಟ್ಟು 193 ಚಿಹ್ನೆಗಳ ಪಟ್ಟಿಯನ್ನು ಚುನಾವಣಾ ಆಯೋಗ ಸೋಮವಾರ ಬಿಡುಗಡೆ ಮಾಡಿದೆ.
ವಿಧಾನಸಭೆಯ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರದ ಎರಡನೇ ದಿನವಾದ ಮಂಗಳವಾರ ಪ್ರಮಾಣ ಸ್ವೀಕರಿಸಬೇಕಾದ 43 ಮಂದಿಯಲ್ಲಿ 16 ಶಾಸಕರು ಹಾಜರಾಗಲೇ ಇಲ್ಲ. ಕಲಾಪದಲ್ಲಿ ಭಾಗವಹಿಸಿದವರ ಸಂಖ್ಯೆಯೂ ಕಡಿಮೆ ಇತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರು ಮಂಗಳವಾರ ಭೇಟಿ ಮಾಡಿದರು. ‘ನಾಡಿನಲ್ಲಿ ಮಳೆ, ಬೆಳೆ ಸಮೃದ್ಧವಾಗಲಿ. ಉತ್ತಮ ಆಡಳಿತ ನಡೆಸುವಂತಾಗಲಿ‘ ಎಂದು ತಿಮ್ಮಕ್ಕ ಅವರು ಮುಖ್ಯಮಂತ್ರಿಗೆ ಶುಭ ಹಾರೈಸಿದರು.
2022ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಗಳ ಫಲಿತಾಂಶವನ್ನು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಮಂಗಳವಾರ ಪ್ರಕಟಿಸಿದ್ದು, ಇಶಿತಾ ಕಿಶೋರ್ ಎಂಬುವವರು ಮೊದಲ ರ್‍ಯಾಂಕ್ ಪಡೆದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಿಂದಲೇ ನೂತನ ಸಂಸತ್ ಭವನವನ್ನು ಉದ್ಘಾಟಿಸುವ ತೀರ್ಮಾನ ಈಗ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ.
ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಎಎಪಿ ರಾಜ್ಯಸಭೆ ಸದಸ್ಯ ಸಂಜಯ್ ಸಿಂಗ್ ಅವರಿಗೆ ಸ್ಥಳೀಯ ಕೋರ್ಟ್ ಮಂಗಳವಾರ ಸಮನ್ಸ್ ಜಾರಿ ಮಾಡಿದೆ.
‘ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿಯಾಗಿರಲಿದ್ದಾರೆ’ ಎಂದು ಸಚಿವ ಎಂ.ಬಿ. ಪಾಟೀಲ ನೀಡಿದ ಹೇಳಿಕೆ ಕಾಂಗ್ರೆಸ್‌ನಲ್ಲಿ ಸಂಚಲನ ಮೂಡಿಸಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ.
‘ಕೊರೊನಾ ವೈರಸ್ ಮನುಷ್ಯನ ದೇಹದ ಮೇಲೆ ಮಾತ್ರ ದುಷ್ಪರಿಣಾಮ ಬೀರುತ್ತದೆ. ಕೋಮು ವೈರಾಣು ವ್ಯಕ್ತಿಯ ವಿವೇಚನೆ ಮೇಲೆ ಪರಿಣಾಮ ಬೀರುತ್ತದೆ’ ಎಂದು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಮಂಗಳವಾರ ಹೇಳಿದ್ದಾರೆ.
ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ ಮನೀಷ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಜೂನ್ 1ರವರೆಗೆ ವಿಸ್ತರಿಸಿ ದೆಹಲಿಯ ನ್ಯಾಯಾಲಯ ಮಂಗಳವಾರ ಆದೇಶ ಹೊರಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.