ರಾಜ್ಯ, ದೇಶ, ವಿದೇಶ ಹಾಗೂ ಕ್ರೀಡೆಗಳಿಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ.
'ಮುಂದಿನ ಬಜೆಟ್ ಮಂಡಿಸುವಾಗ ಬಂಟರ ಅಭಿವೃದ್ದಿ ನಿಗಮ ಸ್ಥಾಪನೆಯನ್ನು ಘೋಷಣೆ ಮಾಡುತ್ತೇನೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಶೀಘ್ರವೇ ಮೊಟ್ಟೆಯ ಜೊತೆಗೆ ಪೌಷ್ಟಿಕಾಂಶವುಳ್ಳ ವಿಶೇಷ ಆಹಾರ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್ಐಎ) ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಮೂವರು ಆರೋಪಿಗಳ ಪತ್ತೆಗೆ ಬಹುಮಾನ ಘೋಷಿಸಿದೆ.
ರಾಜ್ಯದಲ್ಲಿ ಈರುಳ್ಳಿಗೆ ಬೇಡಿಕೆ ಹೆಚ್ಚಾಗುತ್ತಿರುವ ರೀತಿಯಲ್ಲಿ ಪೂರೈಕೆ ಆಗುತ್ತಿಲ್ಲ. ಹೀಗಾಗಿ ಸಗಟು ಮತ್ತು ಚಿಲ್ಲರೆ ಮಾರಾಟ ದರ ಏರಿಕೆ ಕಾಣುತ್ತಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಸದ್ಯ ಕೆ.ಜಿಗೆ ಗರಿಷ್ಠ ₹70ರಂತೆ ಮಾರಾಟ ಆಗುತ್ತಿದ್ದು, ಪೂರೈಕೆ ಸುಧಾರಿಸದೇ ಇದ್ದರೆ ಕೆ.ಜಿಗೆ ₹100ರ ಗಡಿ ದಾಟುವ ಸಾಧ್ಯತೆ ಇದೆ.
ರೋಜ್ಗಾರ್ ಮೇಳದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶನಿವಾರ) ವಿಡಿಯೊ ಕಾನ್ಫರೆನ್ಸ್ ಮೂಲಕ ಹೊಸದಾಗಿ ಸೇರಿದ 50 ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ನೀಡಿದರು.
‘ರಾಜ್ಯದಲ್ಲಿ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬಂದರೆ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಉಚಿತ ಶಿಕ್ಷಣ ನೀಡಲಾಗುವುದು ಹಾಗೂ ಬೀಡಿ ಎಲೆ ಸಂಗ್ರಹಕಾರರಿಗೆ ವಾರ್ಷಿಕ ₹4 ಸಾವಿರ ಸಹಾಯಧನ ನೀಡಲಾಗುವುದು’ ಎಂದು ಪಕ್ಷದ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದರು.
ಇಸ್ರೇಲ್-ಹಮಾಸ್ ಸಂಘರ್ಷಕ್ಕೆ ಸಂಬಂಧಪಟ್ಟಂತೆ ಗಾಜಾದಲ್ಲಿ ಮಾನವೀಯ ನೆಲೆಯಲ್ಲಿ ಕದನ ವಿರಾಮ ಘೋಷಿಸಬೇಕೆಂಬ ವಿಶ್ವಸಂಸ್ಥೆಯ ಮಹಾಸಭೆಯ ನಿರ್ಣಯದಿಂದ ಭಾರತ ಹೊರಗುಳಿದಿದೆ.
ಗುಜರಾತ್ನ ಸೂರತ್ ನಗರದ ಅಪಾರ್ಟ್ಮೆಂಟ್ನಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿಯ ಮೃತದೇಹಗಳು ಪತ್ತೆಯಾಗಿದ್ದು, ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶನಿವಾರ ಅನುಮಾನ ವ್ಯಕ್ತಪಡಿಸಿದ್ದಾರೆ.
ಅಮೆರಿಕದ ಮೈನೆ ರಾಜ್ಯದಲ್ಲಿನ ಲೆವಿಸ್ಟನ್ ನಗರದ ರೆಸ್ಟೋರೆಂಟ್ ಮತ್ತು ‘ಬೌಲಿಂಗ್ ಅಲೈ’ ಕೇಂದ್ರದ ಮೇಲೆ ದಾಳಿ ನಡೆಸಿ 18 ಜನರನ್ನು ಹತ್ಯೆಗೈದಿದ್ದ ಬಂದೂಕುಧಾರಿಯೊಬ್ಬ ಸ್ವಯಂ ಪ್ರೇರಿತವಾಗಿ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾನೆ ಎಂದು ಅಮೆರಿಕದ ಮಾಧ್ಯಮಗಳು ವರದಿ ಮಾಡಿವೆ.
ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಇಂದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ತೋರಿದ ಆಸ್ಟ್ರೇಲಿಯಾ, ಕೊನೆ ಹಂತದಲ್ಲಿ ನಾಟಕೀಯ ಕುಸಿತ ಕಂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.