ADVERTISEMENT

Top 10 News | ಈ ದಿನದ ಪ್ರಮುಖ ಸುದ್ದಿಗಳು: ಅಕ್ಟೋಬರ್ 26 ಗುರುವಾರ 2023

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಅಕ್ಟೋಬರ್ 2023, 12:57 IST
Last Updated 26 ಅಕ್ಟೋಬರ್ 2023, 12:57 IST
<div class="paragraphs"><p>ರಾಜ್ಯ, ದೇಶ, ವಿದೇಶದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..</p></div>

ರಾಜ್ಯ, ದೇಶ, ವಿದೇಶದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

   

Tiger Claw: ನಕಲಿ ಹುಲಿ ಉಗುರು ಧರಿಸದಂತೆ ಸಚಿವ ಈಶ್ವರ ಖಂಡ್ರೆ ಮನವಿ, ಕುಕ್ಕೆ ಸುಬ್ರಹ್ಮಣ್ಯ: ಅ. 28 ರಂದು ದೇವರ ದರ್ಶನ ಸಮಯದಲ್ಲಿ ಬದಲಾವಣೆ, ICC World Cup: ಚಾಂಪಿಯನ್ ಇಂಗ್ಲೆಂಡ್ ತಂಡವನ್ನು 156 ರನ್‌ಗೆ ಕಟ್ಟಿಹಾಕಿದ ಲಂಕಾ ಸೇರಿದಂತೆ ಈ ದಿನದ ಪ್ರಮುಖ ಸುದ್ದಿಗಳು ಇಲ್ಲಿವೆ..

Tiger Claw: ನಕಲಿ ಹುಲಿ ಉಗುರು ಧರಿಸದಂತೆ ಸಚಿವ ಈಶ್ವರ ಖಂಡ್ರೆ ಮನವಿ

ADVERTISEMENT

ಅಕ್ರಮವಾಗಿ ವನ್ಯಜೀವಿ ಉತ್ಪನ್ನಗಳನ್ನು ಇಟ್ಟುಕೊಂಡಿರುವವರು ಅವುಗಳನ್ನು ಸರ್ಕಾರಕ್ಕೆ ಮರಳಿಸಲು ಕೊನೆಯ ಅವಕಾಶ ನೀಡುವ ಕಾನೂನು ಸಾಧ್ಯತೆಗಳನ್ನು ಪರಾಮರ್ಶಿಸಲಾಗುತ್ತಿದೆ ಎಂದು ಅರಣ್ಯ, ವನ್ಯಜೀವಿ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಈ ಸುದ್ದಿಯನ್ನು ಪೂರ್ಣ ಓದಿ: Tiger Claw: ನಕಲಿ ಹುಲಿ ಉಗುರು ಧರಿಸದಂತೆ ಸಚಿವ ಈಶ್ವರ ಖಂಡ್ರೆ ಮನವಿ

ಕುಕ್ಕೆ ಸುಬ್ರಹ್ಮಣ್ಯ: ಅ. 28 ರಂದು ದೇವರ ದರ್ಶನ ಸಮಯದಲ್ಲಿ ಬದಲಾವಣೆ

ಚಂದ್ರ ಗ್ರಹಣದ ಕಾರಣ ಶನಿವಾರ (ಅ. 28) ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ಈ ಸುದ್ದಿಯನ್ನು ಪೂರ್ಣ ಓದಿ: ಕುಕ್ಕೆ ಸುಬ್ರಹ್ಮಣ್ಯ: ಅ. 28 ರಂದು ದೇವರ ದರ್ಶನ ಸಮಯದಲ್ಲಿ ಬದಲಾವಣೆ

‌ಲೋಕಸಭೆಗೆ ಮೊದಲು BRS, BJP, AIMIM ‘ಚೆಡ್ಡಿ ಗ್ಯಾಂಗ್‌’ ರಚನೆ: ರೇವಂತ್‌ ರೆಡ್ಡಿ

ತೆಲಂಗಾಣದ ವಿಧಾನಸಭೆ ಚುನಾವಣೆಯಲ್ಲಿ ಬಿಆರ್‌ಎಸ್‌, ಎಐಎಂಐಎಂ ಮತ್ತ ಬಿಜೆಪಿ ಪ್ರತ್ಯೇಕವಾಗಿ ಚುನಾವಣೆ ಎದುರಿಸುತ್ತಿರಬಹುದು. ಆದರೆ ಲೋಕಸಭೆ ಚುನಾವಣೆಗೆ ಮೊದಲು ‘ಚೆಡ್ಡಿ ಗ್ಯಾಂಗ್‌’ ಒಗ್ಗೂಡಿ ಮೈತ್ರಿ ಮಾಡಿಕೊಳ್ಳಲಿವೆ ಎಂದು ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷ ಎ. ರೇವಂತ್‌ ರೆಡ್ಡಿ ಹೇಳಿದರು.

ಈ ಸುದ್ದಿಯನ್ನು ಪೂರ್ಣ ಓದಿ: ಲೋಕಸಭೆಗೆ ಮೊದಲು BRS, BJP, AIMIM ‘ಚೆಡ್ಡಿ ಗ್ಯಾಂಗ್‌’ ರಚನೆ: ರೇವಂತ್‌ ರೆಡ್ಡಿ

ಐದು ವರ್ಷಗಳ ಬಳಿಕ ಮದುವೆಯ ವಿಡಿಯೊ ಬಿಡುಗಡೆ ಮಾಡಿದ ರಣವೀರ್‌–ದೀಪಿಕಾ

ಹಿಂದಿಯಲ್ಲಿ ಹೆಚ್ಚು ಜನಪ್ರಿಯತೆ ಪಡೆದಿರುವ ಕಾಫಿ ವಿತ್‌ ಕರಣ್ ಕಾರ್ಯಕ್ರಮದ ಎಂಟನೇ ಆವೃತ್ತಿ ಆರಂಭವಾಗಿದೆ. ಇದಕ್ಕೆ ಮೊದಲ ಅತಿಥಿಗಳಾಗಿ ಬಾಲಿವುಡ್‌ನ ಸ್ಟಾರ್‌ ಜೋಡಿ ದೀಪಿಕಾ ಪಡುಕೋಣೆ ಮತ್ತು ರಣವೀರ್‌ ಸಿಂಗ್‌ ಭಾಗವಹಿಸಿದ್ದಾರೆ.

ಈ ಸುದ್ದಿಯನ್ನು ಪೂರ್ಣ ಓದಿ: ಐದು ವರ್ಷಗಳ ಬಳಿಕ ಮದುವೆಯ ವಿಡಿಯೊ ಬಿಡುಗಡೆ ಮಾಡಿದ ರಣವೀರ್‌–ದೀಪಿಕಾ

ಗೋವಾ: 37ನೇ ರಾಷ್ಟ್ರೀಯ ಕ್ರೀಡಾಕೂಟ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಗೋವಾದ ಪಂಡಿತ್ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಇಂದು (ಗುರುವಾರ) ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರು 37ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಬಳಿಕ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ.

ಈ ಸುದ್ದಿಯನ್ನು ಪೂರ್ಣ ಓದಿ: ಗೋವಾ: 37ನೇ ರಾಷ್ಟ್ರೀಯ ಕ್ರೀಡಾಕೂಟ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ICC World Cup: ಚಾಂಪಿಯನ್ ಇಂಗ್ಲೆಂಡ್ ತಂಡವನ್ನು 156 ರನ್‌ಗೆ ಕಟ್ಟಿಹಾಕಿದ ಲಂಕಾ

ಸಂಘಟಿತ ಬೌಲಿಂಗ್‌ ಪ್ರದರ್ಶನ ನೀಡಿದ ಶ್ರೀಲಂಕಾ, ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಇಂದಿನ ಪಂದ್ಯದಲ್ಲಿ ಹಾಲಿ ವಿಶ್ವ ಚಾಂಪಿಯನ್‌ ಇಂಗ್ಲೆಂಡ್‌ ತಂಡವನ್ನು 156 ರನ್‌ಗಳಿಗೆ ಕಟ್ಟಿಹಾಕಿದೆ.

ಈ ಸುದ್ದಿಯನ್ನು ಪೂರ್ಣ ಓದಿ: ICC World Cup: ಚಾಂಪಿಯನ್ ಇಂಗ್ಲೆಂಡ್ ತಂಡವನ್ನು 156 ರನ್‌ಗೆ ಕಟ್ಟಿಹಾಕಿದ ಲಂಕಾ

ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ, ಚರ್ಚೆಗೆ ಬನ್ನಿ- ಡಿಕೆಶಿ

 ‘ನಾನು ಏನು ಮಾಡಿದ್ದೇನೆ, ಕುಮಾರಸ್ವಾಮಿ ಏನು ಮಾಡಿದ್ದಾರೆ ಎಂದು ಬಹಿರಂಗ ಚರ್ಚೆ ಮಾಡೋಣ. ಅವರು ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ‘ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳೊದರು.

ಈ ಸುದ್ದಿಯನ್ನು ಪೂರ್ಣ ಓದಿ: ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ, ಚರ್ಚೆಗೆ ಬನ್ನಿ- ಡಿಕೆಶಿ

ಫೆಮಾ ಪ್ರಕರಣ: ರಾಜಸ್ಥಾನ ಸಿಎಂ ಅಶೋಕ್ ಗೆಹಲೋತ್ ಮಗನಿಗೆ ಇಡಿ ಸಮನ್ಸ್

ವಿದೇಶಿ ವಿನಿಮಯ ಕಾನೂನನ್ನು ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರ ಮಗ ವೈಭವ್ ಗೆಹಲೋತ್ ಅವರಿಗೆ ಜಾರಿ ನಿರ್ದೇಶನಾಲಯ(ಇ.ಡಿ) ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.

ಈ ಸುದ್ದಿಯನ್ನು ಪೂರ್ಣ ಓದಿ: ಫೆಮಾ ಪ್ರಕರಣ: ರಾಜಸ್ಥಾನ ಸಿಎಂ ಅಶೋಕ್ ಗೆಹಲೋತ್ ಮಗನಿಗೆ ಇಡಿ ಸಮನ್ಸ್

ಕಾಂಗ್ರೆಸ್ ಯೋಜನೆಗಳ ಲಾಭ ಜನರಿಗೆ ತಲುಪುವುದು ಬಿಜೆಪಿಗೆ ಇಷ್ಟವಿಲ್ಲ: ಗೆಹಲೋತ್

ರಾಜಸ್ಥಾನದಲ್ಲಿ ಕಾಂಗ್ರೆಸ್‌ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳ ಲಾಭ ಮಹಿಳೆಯರು, ರೈತರು ಮತ್ತು ಬಡವರಿಗೆ ತಲುಪುವುದು ಬಿಜೆಪಿಗೆ ಇಷ್ಟವಿಲ್ಲ. ಹಾಗಾಗಿ, ರಾಜ್ಯದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಗುರುವಾರ ಆರೋಪಿಸಿದ್ದಾರೆ.

ಈ ಸುದ್ದಿಯನ್ನು ಪೂರ್ಣ ಓದಿ: ಕಾಂಗ್ರೆಸ್ ಯೋಜನೆಗಳ ಲಾಭ ಜನರಿಗೆ ತಲುಪುವುದು ಬಿಜೆಪಿಗೆ ಇಷ್ಟವಿಲ್ಲ: ಗೆಹಲೋತ್

ಸದನದಲ್ಲಿ ಪ್ರಶ್ನೆ ಕೇಳಲು ಉದ್ಯಮಿಯಿಂದ ಲಂಚ ಪಡೆದ ಆರೋಪ: ಅ.31ರಂದು ಮಹುವಾ ವಿಚಾರಣೆ

ಸದನದಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿಯೊಬ್ಬರಿಂದ ಲಂಚ ಪಡೆದ ಆರೋಪ ಎದುರಿಸುತ್ತಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷದ ಸಂಸದೆ ಮಹುವಾ ಮೋಯಿತ್ರಾ ಅವರಿಗೆ ಅಕ್ಟೋಬರ್ 31ರಂದು ವಿಚಾರಣೆಗೆ ಹಾಜರಾಗುವಂತೆ ಲೋಕಸಭೆಯ ನೀತಿ ನಿಯಮ ಸಮಿತಿ ಸೂಚಿಸಿದೆ.

ಈ ಸುದ್ದಿಯನ್ನು ಪೂರ್ಣ ಓದಿ: ಸದನದಲ್ಲಿ ಪ್ರಶ್ನೆಕೇಳಲು ಉದ್ಯಮಿಯಿಂದ ಲಂಚ ಪಡೆದ ಆರೋಪ: ಅ.31ರಂದು ಮಹುವಾ ವಿಚಾರಣೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.