ADVERTISEMENT

ನ. 28ರಂದು ಸೊರೇನ್‌ ಪ್ರಮಾಣ: ರಾಹುಲ್ ಗಾಂಧಿ ಸೇರಿ ಪ್ರಮುಖ ನಾಯಕರು ಭಾಗಿ ಸಾಧ್ಯತೆ

ಪಿಟಿಐ
Published 25 ನವೆಂಬರ್ 2024, 11:01 IST
Last Updated 25 ನವೆಂಬರ್ 2024, 11:01 IST
<div class="paragraphs"><p>ರಾಹುಲ್ ಗಾಂಧಿ ಹಾಗೂ&nbsp;&nbsp;ಹೇಮಂತ್ ಸೊರೇನ್‌</p></div>

ರಾಹುಲ್ ಗಾಂಧಿ ಹಾಗೂ  ಹೇಮಂತ್ ಸೊರೇನ್‌

   

(ಪಿಟಿಐ ಚಿತ್ರ) 

ರಾಂಚಿ: ಜಾರ್ಖಂಡ್‌ನಲ್ಲಿ ‘ಇಂಡಿಯಾ’ ಮೈತ್ರಿಕೂಟವನ್ನು ಗೆಲುವಿನ ದಡ ಮುಟ್ಟಿಸಿರುವ ಜೆಎಂಎಂ ಕಾರ್ಯಾಧ್ಯಕ್ಷ ಹೇಮಂತ್ ಸೊರೇನ್‌ ಅವರು ನ. 28ರಂದು ನಾಲ್ಕನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ADVERTISEMENT

ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಸೇರಿದಂತೆ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನವೆಂಬರ್ 28ರಂದು ರಾಂಚಿಯ ಮೊರಾಬಾಡಿ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಇಂಡಿಯಾ ಮೈತ್ರಿಕೂಟದ ಎಲ್ಲ ಪ್ರಮುಖ ನಾಯಕರನ್ನು ಆಹ್ವಾನಿಸಲಾಗಿದೆ.

ಪ್ರಸ್ತುತ ಉಸ್ತುವಾರಿ ಮುಖ್ಯಮಂತ್ರಿ ಆಗಿರುವ ಸೊರೇನ್‌ ಅವರಿಗೆ ನೂತನ ಸರ್ಕಾರ ರಚಿಸಲು ರಾಜ್ಯಪಾಲರಾದ ಸಂತೋಷ್‌ ಗಂಗ್ವಾರ್‌ ಅವರು ಭಾನುವಾರ ಆಹ್ವಾನಿಸಿದ್ದರು

ಇದಕ್ಕೂ ಮೊದಲು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಹೇಮಂತ್ ಅವರಿಗೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವವರೆಗೆ ಉಸ್ತುವಾರಿ ಮುಖ್ಯಮಂತ್ರಿಯಾಗಿ ಮುಂದುವರಿಯಲು ರಾಜ್ಯಪಾಲರು ಸೂಚಿಸಿದ್ದರು.

81 ಸದಸ್ಯ ಬಲದ ಜಾರ್ಖಂಡ್‌ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟವು 56 ಸ್ಥಾನಗಳಿಸಿತ್ತು. ರಾಜ್ಯದಲ್ಲಿ ಸರ್ಕಾರ ರಚನೆಗೆ ಸರಳ ಬಹುಮತವಾಗಿ 41 ಸ್ಥಾನದ ಅಗತ್ಯವಿತ್ತು.

ಮೈತ್ರಿಕೂಟದ ಭಾಗವಾಗಿರುವ ಜೆಎಂಎಂ 34 ಸ್ಥಾನ ಗಳಿಸಿದ್ದರೆ ಕಾಂಗ್ರೆಸ್‌ 16, ಆರ್‌ಜೆಡಿ 4 ಮತ್ತು ಸಿಪಿಐ–ಎಂಎಲ್ 2 ಸ್ಥಾನ ಗೆದ್ದುಕೊಂಡಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.