ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ | ಸರ್ಕಾರಿ ಶಾಲೆಗಳಿಗೆ ಉಚಿತ ನೀರು, ವಿದ್ಯುತ್ ಪೂರೈಕೆ: ಸಿದ್ದರಾಮಯ್ಯ | ಬೆಳಗಾವಿಗೆ ನುಗ್ಗಲು ಶಿವಸೇನೆ ಯತ್ನ: 90 ಕಿ.ಮೀ ದೂರದಲ್ಲೇ ತಡೆದ ಪೊಲೀಸರು | ಮತ್ತಷ್ಟು ಪ್ರಮುಖ ಸುದ್ದಿಗಳು...
ಬೆಂಗಳೂರು: ‘ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ಉಚಿತ ಕುಡಿಯುವ ನೀರು ಮತ್ತು ವಿದ್ಯುತ್ ಪೂರೈಕೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಿದ್ದ 68ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ರಾಜ್ಯದೆಲ್ಲೆಡೆ ಸಂಭ್ರಮ, ಸಡಗರದಿಂದ 68ನೇ ಕನ್ನಡ ರಾಜ್ಯೋತ್ಸವ ಸಂಭ್ರಮದಿಂದ ಬುಧವಾರ ಆಚರಿಸಲಾಯಿತು. ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಜಿಲ್ಲಾಡಳಿತ, ಕನ್ನಡ ಪರ ಸಂಘಟನೆಗಳು, ಶಾಲಾ ಕಾಲೇಜುಗಳಲ್ಲಿ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶುಭ ಹಾರೈಸಿದರು.
ಬೆಳಗಾವಿ: ಕರ್ನಾಟಕ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಆಯೋಜಿಸಿದ ಕರಾಳ ದಿನಾಚರಣೆಯಲ್ಲಿ ಭಾಗವಹಿಸಲು ಆಗಮಿಸುತ್ತಿದ್ದ, ಮಹಾರಾಷ್ಟ್ರದ ಶಿವಸೇನೆ ಕಾರ್ಯಕರ್ತರನ್ನು ನಿಪ್ಪಾಣಿ ತಾಲ್ಲೂಕಿನ ಕೊಗನೊಳ್ಳಿ ಬಳಿ ಕರ್ನಾಟಕ– ಮಹಾರಾಷ್ಟ್ರ ಗಡಿಯಲ್ಲಿಯೇ ಪೊಲೀಸರು ತಡೆದರು.
ಬೆಂಗಳೂರು: “ಪಕ್ಷದ ಸಂಘಟನೆ, ಅಧಿಕಾರ ಹಾಗೂ ಸರ್ಕಾರದ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರು ಸಾರ್ವಜನಿಕವಾಗಿ ಮಾತನಾಡುವಂತಿಲ್ಲ. ಪಕ್ಷದ ಶಿಸ್ತು ಮೀರಿ ಮಾತನಾಡಿದರೆ ಯಾರೇ ಆದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಸಚಿವರು ಹಾಗೂ ಪಕ್ಷದ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದರು.
ತುಮಕೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ನಮಗೆ ಕೊಟ್ಟರೆ ಸಮಗ್ರವಾಗಿ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಇಲ್ಲಿ ಬುಧವಾರ ಹೇಳಿದರು.
ಕಲಬುರಗಿ: ‘ಕೆಇಎ ನೇಮಕಾತಿ ಪರೀಕ್ಷೆಯ ಬ್ಲೂಟೂತ್ ಪ್ರಕರಣದ ಪೊಲೀಸ್ ತನಿಖೆಯ ಪ್ರಾಥಮಿಕ ಮಾಹಿತಿ ಬಂದ ಬಳಿಕ, ಪ್ರಕರಣವನ್ನು ಸಿಐಡಿಗೆ ಒಪ್ಪಿಸುವುದರ ಕುರಿತು ನೋಡೋಣ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಬೆಂಗಳೂರು: ಸಿಂಗಸಂದ್ರ ಭಾಗದಲ್ಲಿ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಚಿರತೆಯನ್ನು ಇಂದು (ಬುಧವಾರ) ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಗಾಜಾ: ಯುದ್ಧ ಪೀಡಿತ ಗಾಜಾದಲ್ಲಿ ಸಿಲುಕಿಕೊಂಡಿರುವ ವಿದೇಶಿ ಪ್ರಜೆಗಳು ಮತ್ತು ಗಾಯಗೊಂಡವರು ರಫಾ ಗಡಿಯ ಮೂಲಕ ಈಜಿಪ್ಟ್‌ಗೆ ಹೋಗಲು ತಾತ್ಕಾಲಿಕವಾಗಿ ಅವಕಾಶ ಕಲ್ಪಿಸಲಾಗಿದೆ.
ಟಿಪಾ (ಮಿಜೋರಾಂ): ‘ಹಿಂಸಾಚಾರಪೀಡಿತ ಮಣಿಪುರದಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಗಳು ಒಟ್ಟಾಗಿ ಕುಳಿತು ಬಿಚ್ಚುಮನಸ್ಸಿನಿಂದ ಚರ್ಚಿಸಬೇಕು. ಆ ಮೂಲಕ ಎರಡೂ ಕಡೆಯ ನಂಬಿಕೆಯನ್ನು ಗಟ್ಟಿಗೊಳಿಸಿಕೊಳ್ಳಬೇಕು’ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಸಲಹೆ ನೀಡಿದ್ದಾರೆ.
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸತತ ಆರು ಗೆಲುವುಗಳನ್ನು ಗಳಿಸಿರುವ ಟೀಮ್ ಇಂಡಿಯಾ, ಅಜೇಯ ಓಟವನ್ನು ಮುಂದುವರಿಸುವ ತವಕದಲ್ಲಿದೆ. ಈ ನಡುವೆ ತಂಡದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ಶ್ರೀಲಂಕಾ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಪಂದ್ಯಗಳಿಂದಲೂ ಹೊರಗುಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.