ಕೋಲಾರ | ಕುಡಿಯುವ ನೀರಿಗೆ ಮೀಸಲಾದ ಯರಗೋಳ್ ಜಲಾಶಯ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ, ಕೆಇಎ ನೇಮಕಾತಿ ಅಕ್ರಮ ಪ್ರಕರಣ: ಸಿಐಡಿ ತನಿಖೆಗೆ, ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ನಾನೂ ಆಕಾಂಕ್ಷಿ: ಅಶ್ವತ್ಥನಾರಾಯಣ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ
ಕೋಲಾರ ನಗರ, ಬಂಗಾರಪೇಟೆ ಹಾಗೂ ಮಾಲೂರು ಪಟ್ಟಣಗಳ ಜನರಿಗೆ ಕುಡಿಯುವ ನೀರು ಪೂರೈಸಲಿರುವ ಯರಗೋಳ್ ಜಲಾಶಯವನ್ನು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಐಸ್‌ಲೆಂಡ್‌ನಲ್ಲಿ ಕಳೆದ 14 ಗಂಟೆಗಳ ಅವಧಿಯಲ್ಲಿ 800 ಬಾರಿ ಭೂಮಿ ಕಂಪಿಸಿದೆ. ರಿಕ್ಟರ್ ಮಾಪನದಲ್ಲಿ 5.2ರಷ್ಟಿದ್ದ ತೀವ್ರತೆಯಿಂದಾಗಿ ಜ್ವಾಲಾಮುಖಿ ಸ್ಪೋಟಿಸುವ ಭೀತಿ ಎದುರಾಗಿದೆ. ಇದರಿಂದಾಗಿ ತುರ್ತು ಪರಿಸ್ಥಿತಿಯನ್ನು ದೇಶದಲ್ಲಿ ಹೇರಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನೇಮಕಾತಿ ಪರೀಕ್ಷೆಯಲ್ಲಿ ಕಲಬುರಗಿ, ಯಾದಗಿರಿ ಸೇರಿದಂತೆ ವಿವಿಧೆಡೆ ನಡೆದ ಅಕ್ರಮ ಬ್ಲೂಟೂತ್ ಡಿವೈಸ್ ಬಳಕೆಯ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆ ದೀಪಾವಳಿ ಸಂದರ್ಭದಲ್ಲಿ ‘ವೋಕಲ್ ಫಾರ್ ಲೋಕಲ್‘ಗೆ ಕರೆ ನೀಡಿದ ಬೆನ್ನಲೇ ದೇಶದ ನಾಗರೀಕರಿಂದ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ.
‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ನೇಮಕದ ವಿಷಯದಲ್ಲಿ ಹೈಕಮಾಂಡ್ ಕೊನೆಗೂ ಗಜಪ್ರಸವ ಮಾಡಿದೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೂ ಆಯ್ಕೆ ಮಾಡಿ ಗಜೇಂದ್ರ ಮೋಕ್ಷ ನೀಡಲಿ’ ಎಂದು ಚಾಮರಾಜನಗರ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದರು.
‘ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ನಾನೂ ಆಕಾಂಕ್ಷಿ’ ಎಂದು ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ತಮಿಳುನಾಡು ಸರ್ಕಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸು ಮತ್ತು ಆಮ್ನಿ ನಡುವೆ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಶನಿವಾರ ನಸುಕಿನಲ್ಲಿ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಐವರು ಮೃತಪಟ್ಟು, 60 ಜನರಿಗೆ ಗಾಯಗಳಾಗಿವೆ.
‘ಯುವ ನಾಯಕ ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ನೀಡಿರುವುದು ಒಳ್ಳೆಯ ಬೆಳವಣಿಗೆ’ ಎಂದು ಸಂಸದ ಪ್ರತಾಪ ಸಿಂಹ ಹೇಳಿದರು.
ಟೈಗರ್–3 ಸಿನಿಮಾ ದೀಪಾವಳಿ ಪ್ರಯುಕ್ತ ನಾಳೆ ( ಭಾನುವಾರ) ವಿಶ್ವದಾದ್ಯಂತ ತೆರೆಗೆ ಅಪ್ಪಳಿಸಲಿದೆ. ಚಿತ್ರದ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳದಂತೆ ತಮ್ಮ ಅಭಿಮಾನಿಗಳಿಗೆ ನಟ ಸಲ್ಮಾನ್ ಖಾನ್ ಮನವಿ ಮಾಡಿದ್ದಾರೆ.
ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ ಐಸಿಸಿ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಆಸೀಸ್ 8 ವಿಕೆಟ್‌ಗಳಿಂದ ಮಣಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.