ADVERTISEMENT

Top 10 News | ಈ ದಿನದ ಪ್ರಮುಖ 10 ಸುದ್ದಿಗಳು: 15 ಆಗಸ್ಟ್ 2023

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಆಗಸ್ಟ್ 2023, 13:15 IST
Last Updated 15 ಆಗಸ್ಟ್ 2023, 13:15 IST
   

Independence Day | ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದ ಮುಖ್ಯಾಂಶಗಳು, ಕಾಂಗ್ರೆಸ್ ಭ್ರಷ್ಟಾಚಾರವನ್ನು ಪ್ಯಾನ್ ಇಂಡಿಯಾ ಸಿನಿಮಾಗಳಿಗೆ ಹೋಲಿಸಿದ ಎಚ್‌ಡಿಕೆ,ಕಲುಷಿತ ನೀರು ಪ್ರಕರಣ | ಕವಾಡಿಗರಹಟ್ಟಿ ಅಭಿವೃದ್ಧಿಗೆ ₹ 4 ಕೋಟಿ: ಸಚಿವ ಸುಧಾಕರ್ ಸೇರಿದಂತೆ ಈ ದಿನದ ಪ್ರಮುಖ ಸುದ್ದಿಗಳು ಇಲ್ಲಿವೆ

Independence Day | ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದ ಮುಖ್ಯಾಂಶಗಳು

ದೇಶದ 77ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಮಂಗಳವಾರ ಧ್ವಜಾರೋಹಣ ನೆರವೇರಿಸಿದರು. ಬಳಿಕ ಅವರು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದರು.

ಇದನ್ನೂ ಪೂರ್ತಿ ಓದಿ:

ADVERTISEMENT

ಸಂವಿಧಾನ, ಪ್ರಜಾಪ್ರಭುತ್ವ ಎತ್ತಿ ಹಿಡಿಯುವ ಪ್ರತಿಜ್ಞೆ ಮಾಡಿದ್ದೇವೆ: ಖರ್ಗೆ

ಸಂವಿಧಾನ ಮತ್ತು ಪ್ರಜಾಪ್ರಭುತ್ವ ಅಪಾಯದಲ್ಲಿದ್ದು ಅವುಗಳನ್ನು ರಕ್ಷಣೆಗೆ ಕಟಿಬದ್ದರಾಗಿದ್ದೇವೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದರು.

ಇದನ್ನೂ ಪೂರ್ತಿ ಓದಿ: ಮಳೆಗೆ ನಲುಗಿದ ಹಿಮಾಚಲ ಪ್ರದೇಶ, ಉತ್ತರಾಖಂಡ: ಹಲವೆಡೆ ರೆಡ್‌ ಅಲರ್ಟ್‌ ಘೋಷಣೆ

ಮಳೆಗೆ ನಲುಗಿದ ಹಿಮಾಚಲ ಪ್ರದೇಶ, ಉತ್ತರಾಖಂಡ: ಹಲವೆಡೆ ರೆಡ್‌ ಅಲರ್ಟ್‌ ಘೋಷಣೆ

ಕಾರ್ಯಾಚರಣೆಯಲ್ಲಿ ತೊಡಗಿರುವ ಎನ್‌ಡಿಆರ್‌ಎಫ್‌ ತಂಡ– ಪಿಟಿಐ ಚಿತ್ರ

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಅನಾಹುತಗಳು ಸಂಭವಿಸುತ್ತಲೇ ಇವೆ. ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿತ ಅವಾಂತರಗಳಿಂದ ಈವರೆಗೆ 55 ಮಂದಿ ಸಾವನ್ನಪ್ಪಿದ್ದರೆ, ಉತ್ತರಾಖಂಡದಲ್ಲಿ ಮೂವರು ಮೃತಪಟ್ಟಿದ್ದಾರೆ.

ಇದನ್ನೂ ಪೂರ್ತಿ ಓದಿ:

ಕಾಂಗ್ರೆಸ್ ಭ್ರಷ್ಟಾಚಾರವನ್ನು ಪ್ಯಾನ್ ಇಂಡಿಯಾ ಸಿನಿಮಾಗಳಿಗೆ ಹೋಲಿಸಿದ ಎಚ್‌ಡಿಕೆ

ಪ್ಯಾನ್‌ ಇಂಡಿಯಾ ಸಿನಿಮಾಗಳಂತೆ ರಾಜ್ಯ ಸರ್ಕಾರದ ಲಂಚಾವತಾರವೂ ಹಲವು ಭಾಗಗಳಾಗಿ ತೆರೆದುಕೊಳ್ಳುತ್ತಿದೆ. ಪ್ರತಿ ಚಿತ್ರಕ್ಕೂ ಕೊನೆಯಲ್ಲಿ ಕ್ಲೈಮ್ಯಾಕ್ಸ್ ಇರುವಂತೆ ಕಾಂಗ್ರೆಸ್‌ ಭ್ರಷ್ಟಾಚಾರದ ನಾಟಕಕ್ಕೂ ಶೀಘ್ರ ತೆರೆ ಬೀಳಲಿದೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಇದನ್ನೂ ಪೂರ್ತಿ ಓದಿ:

ಸಾಮಾಜಿಕ ಕಾರ್ಯಕರ್ತ, ಸುಲಭ್ ಇಂಟರ್‌ನ್ಯಾಷನಲ್‌ ಸ್ಥಾಪಕ ಬಿಂದೇಶ್ವರ್ ಪಾಠಕ್ ನಿಧನ

ಸಾಮಾಜಿಕ ಕಾರ್ಯಕರ್ತ ಹಾಗೂ ಸ್ವಯಂ ಸೇವಾ ಸಂಸ್ಥೆ ಸುಲಭ್ ಇಂಟರ್‌ನ್ಯಾಷನಲ್‌ ಸಂಸ್ಥಾಪಕ ಬಿಂದೇಶ್ವರ್ ಪಾಠಕ್ ಮಂಗಳವಾರ ನಿಧನರಾದರು. 

ಇದನ್ನೂ ಪೂರ್ತಿ ಓದಿ:

ಕಲುಷಿತ ನೀರು ಪ್ರಕರಣ | ಕವಾಡಿಗರಹಟ್ಟಿ ಅಭಿವೃದ್ಧಿಗೆ ₹ 4 ಕೋಟಿ: ಸಚಿವ ಸುಧಾಕರ್

ಕಲುಷಿತ ನೀರು ಕುಡಿದು ದುರಂತ ಸಂಭವಿಸಿದ ನಗರದ 17ನೇ ವಾರ್ಡ್ ವ್ಯಾಪ್ತಿಯ ಕವಾಡಿಗರಹಟ್ಟಿಗೆ ಮೂಲಸೌಲಭ್ಯ ಕಲ್ಪಿಸುವ ಉದ್ದೇಶದಿಂದ ನಗರಾಭಿವೃದ್ಧಿ ಇಲಾಖೆ ₹ 4 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ತಿಳಿಸಿದರು.

ಇದನ್ನೂ ಪೂರ್ತಿ ಓದಿ:

ಚುನಾವಣಾ ಫಲಿತಾಂಶ ಬುಡಮೇಲು ಯತ್ನ: ಟ್ರಂಪ್‌ ವಿರುದ್ಧ ದೋಷಾರೋಪ ಹೊರಿಸಿದ ನ್ಯಾಯಾಲಯ

2020ರಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಜಾರ್ಜಿಯಾದಲ್ಲಿನ ತಮ್ಮ ಸೋಲನ್ನು ಬುಡಮೇಲು ಮಾಡಲು ಪ್ರಯತ್ನಿಸಿದ ಹಾಗೂ ವಂಚನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ವಿರುದ್ದ ನ್ಯಾಯಾಲಯ ದೋಷಾರೋಪ ಹೊರಿಸಿದೆ.

ಇದನ್ನೂ ಪೂರ್ತಿ ಓದಿ:

ಕುಸ್ತಿಪಟು ವಿನೇಶಾ ಪೋಗಟ್‌ಗೆ ಮಂಡಿ ಗಾಯ: ಏಷ್ಯನ್ ಗೇಮ್ಸ್‌ಗೆ ಅಲಭ್ಯ

ಮುಖ ಕುಸ್ತಿಪಟು ವಿನೇಶಾ ಪೋಗಟ್‌ ಮಂಡಿ ಸಮಸ್ಯೆಯಿಂದಾಗಿ ಅವರು ಏಷ್ಯನ್ ಗೇಮ್ಸ್‌ಗೆ ಅಲಭ್ಯರಾಗಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಪೂರ್ತಿ ಓದಿ:

ಎನ್‌ಇಪಿ ರದ್ದು ಮಕ್ಕಳ ಭವಿಷ್ಯಕ್ಕೆ ಮಾರಕ: ಬಸವರಾಜ ಬೊಮ್ಮಾಯಿ

ರಾಜಕೀಯ ಕಾರಣಕ್ಕಾಗಿ ಎನ್‍ಇಪಿ ರದ್ದು ಮಾಡುವುದು ರಾಜ್ಯದ ಮಕ್ಕಳ ಭವಿಷ್ಯಕ್ಕೆ ಮಾರಕ ಎಂದು ಶಾಸಕ ಬಸವರಾಜ ಬೊಮ್ಮಾಯಿ ಟೀಕಿಸಿದರು.

ಇದನ್ನೂ ಪೂರ್ತಿ ಓದಿ:

'ಫೈಟರ್' ಜೆಟ್ ಪೈಲಟ್‌ಗಳಾಗಿ ಹೃತಿಕ್‌, ದೀಪಿಕಾ

ಬಾಲಿವುಡ್‌ನ ಬಹುನಿರೀಕ್ಷಿತ ‘ಫೈಟರ್‌’ ಸಿನಿಮಾದ ಫೋಸ್ಟರ್‌ ವಿಡಿಯೊ ಅನ್ನು ಚಿತ್ರತಂಡ ಸ್ವಾತಂತ್ರ್ಯೋತ್ಸವದ ದಿನದಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಚಿತ್ರವು 2024ರ ಜನವರಿ 25ರಂದು ಬೆಳ್ಳಿ ತೆರೆಯಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಪೂರ್ತಿ ಓದಿ:

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.