ADVERTISEMENT

ರೈತರ 'ಮಹಾಪಂಚಾಯತ್': ದೆಹಲಿಯಲ್ಲಿ ಸಂಚಾರ ದಟ್ಟಣೆ

ಪಿಟಿಐ
Published 14 ಮಾರ್ಚ್ 2024, 10:39 IST
Last Updated 14 ಮಾರ್ಚ್ 2024, 10:39 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ನವದೆಹಲಿ: ರಾಮಲೀಲಾ ಮೈದಾನದಲ್ಲಿ ರೈತ ಸಂಘಟನೆಗಳ ಒಕ್ಕೂಟ ‘ಸಂಯುಕ್ತ ಕಿಸಾನ್‌ ಮೋರ್ಚಾ’ ಗುರುವಾರ ಮಹಾಪಂಚಾಯತ್ ಆಯೋಜನೆ ಮಾಡಿದೆ. ಇದರಿಂದ ದೆಹಲಿಯ ವಿವಿಧ ಭಾಗಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.

ದೆಹಲಿ ಗೇಟ್, ದರಿಯಾಗಂಜ್ ಮತ್ತು ಸರಾಯ್ ಕಾಲೇ ಖಾಂ ಬಳಿಯ ರಾಷ್ಟ್ರೀಯ ಹೆದ್ದಾರಿ-24 ಹಾಗೂ ಇತರ ಸ್ಥಳಗಳಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ.

ADVERTISEMENT

ಸಂಚಾರ ದಟ್ಟಣೆಯಿಂದ ಪ್ರಯಾಣಿಕರಿಗೆ ಕೆಲ ತೊಂದರೆ ಉಂಟಾಗಬಹುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿ ಟ್ರಾಫಿಕ್ ಪೊಲೀಸರು ಸಂಚಾರ ನಿಯಮ ಮತ್ತು ಮಾರ್ಗ ಬದಲಾವಣೆ ಬಗ್ಗೆ ಪ್ರಯಾಣಿಕರಿಗೆ ಮಾಹಿತಿ ನೀಡಿದ್ದಾರೆ. ಸಾರ್ವಜನಿಕ ಸಾರಿಗೆ ವಿಶೇಷವಾಗಿ ಮೆಟ್ರೊ ಸೇವೆ ಬಳಸಿಕೊಳ್ಳುವಂತೆ ಪ್ರಯಾಣಿಕರಿಗೆ ಪೊಲೀಸರು ಮನವಿ ಮಾಡಿದ್ದಾರೆ.

ರೈತರ 'ಮಹಾಪಂಚಾಯತ್‘

ಕೆಲವು ನಿಬಂಧನೆಗಳಿಗೆ ಒಳಪಟ್ಟು, ರಾಮಲೀಲಾ ಮೈದಾನದಲ್ಲಿ ‘ಕಿಸಾನ್‌ ಮಜ್ದೂರ್‌ ಮಹಾಪಂಚಾಯತ್‌’ ಆಯೋಜನೆಗೆ ದೆಹಲಿ ಪೊಲೀಸರು ರೈತರಿಗೆ ಅನುಮತಿ ನೀಡಿದ್ದಾರೆ. ರೈತ ಸಂಘಟನೆಗಳ ಒಕ್ಕೂಟ ‘ಸಂಯುಕ್ತ ಕಿಸಾನ್‌ ಮೋರ್ಚಾ’ ಈ ‘ಮಹಾಪಂಚಾಯತ್‌’ ಆಯೋಜನೆ ಮಾಡಿದೆ.

‘ಸಮಾವೇಶದಲ್ಲಿ 5 ಸಾವಿರಕ್ಕಿಂತ ಹೆಚ್ಚು ಜನರು ಸೇರಬಾರದು. ಟ್ರ್ಯಾಕ್ಟರ್ ಟ್ರಾಲಿಗಳ ರ‍್ಯಾಲಿ ನಡೆಸಬಾರದು ಹಾಗೂ ರಾಮಲೀಲಾ ಮೈದಾನದಲ್ಲಿ ಮೆರವಣಿಗೆ ನಡೆಸಬಾರದು ಎಂಬುದು ಸೇರಿದಂತೆ ಹಲವು ನಿಬಂಧನೆಗಳನ್ನು ವಿಧಿಸಿ, ಅನುಮತಿ ನೀಡಲಾಗಿದೆ’ ಎಂದು ಡಿಸಿಪಿ (ಕೇಂದ್ರೀಯ) ಎಂ.ಹರ್ಷವರ್ಧನ್‌ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.