ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಎರಡು ಕಡೆ ನಡೆದ ಪೊಲೀಸ್ ಎನ್‌ಕೌಂಟರ್‌ನಲ್ಲಿ ‘ದಿ ರೆಸಿಸ್ಟೆನ್ಸ್ ಫ್ರಂಟ್’ (ಟಿಆರ್‌ಎಫ್) ಮತ್ತು ಹಿಜ್ಬುಲ್ ಮುಜಾಹಿದ್ದೀನ್ (ಎಚ್‌ಎಂ) ಸಂಘಟನೆಯ ಒಟ್ಟು ಐವರು ಉಗ್ರರನ್ನು ಕೊಲ್ಲಲಾಗಿದೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಗೋಪ್ಲಾಪೋರಾ ಮತ್ತು ಪೊಂಬೆ ಎಂಬಲ್ಲಿ ಬುಧವಾರ ಈ ಎನ್‌ಕೌಂಟರ್ ನಡೆದಿದೆ. ಪೊಂಬೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮೂವರು ಮತ್ತು ಗೋಪ್ಲಾಪೋರಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.
‘2018ರಿಂದ ಸಕ್ರಿಯನಾಗಿದ್ದ ಹಿಜ್ಬುಲ್ ಮುಜಾಹಿದ್ದೀನ್‌ನ ಜಿಲ್ಲಾ ಕಮಾಂಡರ್ ಶಾಕಿರ್ ನಜರ್ ಮತ್ತು ಇನ್ನಿಬ್ಬರು ಉಗ್ರರು ಪೊಂಬೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತರಾಗಿದ್ದಾರೆ’ ಎಂದು ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕ (ಐಜಿಪಿ) ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಗೋಪ್ಲಾಪೋರಾ ಎನ್‌ಕೌಂಟರ್‌ನಲ್ಲಿ ಹತರಾದ ಇಬ್ಬರು ಭಯೋತ್ಪಾದಕರಲ್ಲಿ ಟಿಆರ್‌ಎಫ್‌ನ ಜಿಲ್ಲಾ ಕಮಾಂಡರ್ ಅಫಕ್ ಸಿಕಂದರ್ ಕೂಡ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.