ಮುಂಬೈ: 2008ರಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಪೊಲೀಸರಿಗೆ, ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಹಾಗೂ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಮಂಗಳವಾರ ಗೌರವ ಸಮರ್ಪಿಸಿದರು.
ಪೊಲೀಸ್ ಆಯಕ್ತರ ಕಚೇರಿ ಆವರಣದಲ್ಲಿರುವ ‘ಹುತಾತ್ಮರ ಸ್ಮಾರಕ’ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡಣವೀಸ್ ಹಾಗೂ ಅಜಿತ್ ಪವಾರ್ ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. ದಾಳಿಯಲ್ಲಿ ಹುತಾತ್ಮರಾಗಿದ್ದ ಪೊಲೀಸರ ಕುಟುಂಬ ಸದಸ್ಯರೂ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗೌರವ ಸಮರ್ಪಿಸಿದರು.
ಪಾಕಿಸ್ತಾನ ಮೂಲದ ಲಷ್ಕರ್–ಎ–ತಯಬಾ (ಎಲ್‌ಇಟಿ) ಸಂಘಟನೆಯ 10 ಉಗ್ರರು 2008ರ ನವೆಂಬರ್ 26ರಂದು, ಮುಂಬೈನ ವಿವಿಧೆಡೆ ಏಕಕಾಲದಲ್ಲಿ ದಾಳಿ ಮಾಡಿದ್ದರು. ದಾಳಿಯಲ್ಲಿ 166 ಮಂದಿ ಮೃತಪಟ್ಟಿದ್ದರು. 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.