ADVERTISEMENT

ಟಿಆರ್‌ಪಿ ಹಗರಣ: ಬಾರ್ಕ್‌ನ ಮಾಜಿ ಸಿಇಒ ಆಸ್ಪತ್ರೆಗೆ ದಾಖಲು

ಪಿಟಿಐ
Published 16 ಜನವರಿ 2021, 9:46 IST
Last Updated 16 ಜನವರಿ 2021, 9:46 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮುಂಬೈ: ಟಿಆರ್‌ಪಿ (ಟೆಲಿವಿಷನ್‌ ರೇಟಿಂಗ್‌ ಪಾಯಿಂಟ್‌) ಹಗರಣದಡಿ ಬಂಧಿಸಲಾಗಿದ್ದ ಬಾರ್ಕ್‌ ಸಂಸ್ಥೆಯ ಮಾಜಿ ಸಿಇಒ ಪಾರ್ಥೊ ದಾಸ್‌ಗುಪ್ತಾ ಅವರನ್ನು ಮುಂಬೈನ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು.

ಶುಕ್ರವಾರ ರಾತ್ರಿ ದಾಸ್‌ಗುಪ್ತಾ ಅವರ ರಕ್ತದಲ್ಲಿ ಸಕ್ಕರೆ ಅಂಶ ಹೆಚ್ಚಾದ ಕಾರಣ ಅವರನ್ನು ಶನಿವಾರ ನವಿ ಮುಂಬೈನ ತಲೋಜಾ ಕೇಂದ್ರ ಕಾರಾಗೃಹದಿಂದ ಜೆಜೆ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಪಾರ್ಥೊ ದಾಸ್‌ಗುಪ್ತಾ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ADVERTISEMENT

ಕಳೆದ ವರ್ಷ ಡಿಸೆಂಬರ್‌ 24 ರಂದು ಪಾರ್ಥೊ ದಾಸ್‌ಗುಪ್ತಾ ಅವರನ್ನುಟಿಆರ್‌ಪಿ ಹಗರಣದಡಿ ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.