ನವದೆಹಲಿ: ರಷ್ಯಾ ಸೇನೆಯಲ್ಲಿ ಸಹಾಯಕ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿರುವ 20 ಭಾರತೀಯರನ್ನು ಆದಷ್ಟು ಶೀಘ್ರ ವಾಪಸು ಕರೆದುಕೊಂಡು ಬರಲು ಸರ್ವ ಪ್ರಯತ್ನ ನಡೆಸಲಾಗುತ್ತಿದೆ ಎಂದು ವಿದೇಶಾಂಗ ಸಚಿವಾಲಯ ಗುರುವಾರ ಹೇಳಿದೆ.
‘20 ಭಾರತೀಯರು ರಷ್ಯಾ ಸೇನೆಯಲ್ಲಿ ಸಹಾಯಕರಾಗಿ ಇಲ್ಲವೇ ಸಹಾಯಕ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬ ಮಾಹಿತಿ ಇದೆ. ಇವರು ಮಾಸ್ಕೊದಲ್ಲಿರುವ ಭಾರತದ ರಾಯಭಾರ ಕಚೇರಿಯನ್ನು ಸಂಪರ್ಕಿಸಿದ್ದರು’ ಎಂದು ಸಚಿವಾಲಯ ವಕ್ತಾರ ರಣಧೀರ್ ಜೈಸ್ವಾಲ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
‘ಭಾರತೀಯರು ರಷ್ಯಾದ ವಿವಿಧ ಸ್ಥಳಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಸುರಕ್ಷಿತವಾಗಿ ಸ್ವದೇಶಕ್ಕೆ ವಾಪಸಾಗುವುದನ್ನು ಖಾತ್ರಿ ಪಡಿಸುವುದಕ್ಕಾಗಿ ರಾಯಭಾರ ಕಚೇರಿಯು ರಷ್ಯಾ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ’ ಎಂದೂ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.