ADVERTISEMENT

ವಿಡಿಯೊ: ರೈಲು ಪ್ರಯಾಣಿಕನ ಮೇಲೆ TTE ದುಂಡಾವರ್ತನೆ– ಮನಸೋಇಚ್ಛೆ ಹಲ್ಲೆ! ಅಮಾನತು

ಈಶಾನ್ಯ ರೈಲ್ವೆ ವಲಯದ ಲಖನೌ ವಿಭಾಗೀಯ ರೈಲ್ವೆ ವ್ಯಾಪ್ತಿಯಲ್ಲಿ ಘಟನೆ: ಟಿಟಿಇ ವರ್ತನೆಗೆ ಹಲವರು ಆಕ್ರೋಶ

ಪಿಟಿಐ
Published 19 ಜನವರಿ 2024, 10:23 IST
Last Updated 19 ಜನವರಿ 2024, 10:23 IST
<div class="paragraphs"><p>ಘಟನೆ ನಡೆದ ಸಂದರ್ಭ</p></div>

ಘಟನೆ ನಡೆದ ಸಂದರ್ಭ

   

ನವದೆಹಲಿ: ರೈಲು ಟಿಕೆಟ್ ಪರೀಕ್ಷಕ (ಟಿಟಿಇ), ಪ್ರಯಾಣಿಕನೊಬ್ಬನಿಗೆ ಮನಸೋಇಚ್ಛೆ ಹಲ್ಲೆ ಮಾಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಈ ಕುರಿತ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈಶಾನ್ಯ ರೈಲ್ವೆ ವಲಯದ ಲಖನೌ ವಿಭಾಗೀಯ ರೈಲ್ವೆ ವ್ಯಾಪ್ತಿಯಲ್ಲಿ ಗುರುವಾರ ಈ ಘಟನೆ ನಡೆದಿದ್ದು ಹಲ್ಲೆ ನಡೆಸಿದ್ದ ಟಿಟಿಇ ಅನ್ನು ಅಮಾನತು ಮಾಡಲಾಗಿದೆ.

ADVERTISEMENT

ಬರೌಣಿ–ಲಖನೌ ಎಕ್ಸ್‌ಪ್ರೆಸ್ ರೈಲು ಉತ್ತರ ಪ್ರದೇಶದ ಗೋಂಡಾ–ಬಾರಾಬಂಕಿ ನಡುವೆ ಚಲಿಸುತ್ತಿದ್ದ ವೇಳೆ ಈ ಘಟನೆ ನಡೆದಿತ್ತು. ಘಟನೆಯನ್ನು ವಿಡಿಯೊ ಮಾಡಿದವರ ಮೇಲೂ ಟಿಟಿಇ ದುರ್ವತನೆ ತೋರಿರುವುದು ವಿಡಿಯೊದಲ್ಲಿ ದಾಖಲಾಗಿದೆ.

‘ಯಾವುದೋ ಕಾರಣಕ್ಕೆ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ ಡೆಪ್ಯೂಟಿ ಟಿಟಿಟಿ ಪ್ರಕಾಶ್ ಅವರನ್ನು ತಕ್ಷಣವೇ ಅಮಾನತು ಮಾಡಲಾಗಿದ್ದು, ಅವರ ವಿರುದ್ಧ ಮೇಲಾಧಿಕಾರಿಗಳು ತನಿಖೆ ನಡೆಸಲು ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶಿಸಿರುವುದಾಗಿ’ ಲಖನೌ ರೈಲ್ವೆ ವಿಭಾಗದ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ಹಲ್ಲೆಗೊಳಗಾದ ಪ್ರಯಾಣಿಕ ಇನ್ನೂ ದೂರು ದಾಖಲಿಸಿಲ್ಲ. ವಿಡಿಯೊ ಆಧಾರದ ಮೇಲೆ ತಕ್ಷಣ ಕ್ರಮ ಕೈಗೊಂಡಿದ್ದು, ಪ್ರಯಾಣಿಕನನ್ನು ಕರೆಯಿಸಿ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಟಿಟಿಇ ದುರ್ವರ್ತನೆ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಗಮನಕ್ಕೂ ಬಂದಿದ್ದು, ಅಧಿಕಾರಿ, ಸಿಬ್ಬಂದಿಗಳ ಇಂತಹ ವರ್ತನೆಗಳನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ನೆಟ್ಟಿಗರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು, ಇತ್ತೀಚೆಗೆ ವಿಮಾನದಲ್ಲಿ ಪ್ರಯಾಣಿಕನೊಬ್ಬ ಪೈಲಟ್ ಮೇಲೆ ಹಲ್ಲೆ ಮಾಡಿದ್ದಕ್ಕೆ ಎಫ್‌ಐಆರ್ ದಾಖಲಾಗಿತ್ತು. ಈ ಘಟನೆಯಲ್ಲಿ ಬರೀ ಅಮಾನತು ಏಕೆ? ಎಂದು ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.