ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಕಾಯಂ ಸದಸ್ಯತ್ವ ಲಭಿಸಿದರೆ ಟರ್ಕಿಗೆ ಹೆಮ್ಮೆ ಅನಿಸಲಿದೆ ಎಂದು ಅಲ್ಲಿನ ಪ್ರಧಾನಿ ರೆಸೆಪ್ ತಯ್ಯಿಪ್ ಎರ್ಡೊಗನ್ ಹೇಳಿದ್ದಾರೆ.
ಜತೆಗೆ ಕಾಯಂ ಸದಸ್ಯರಲ್ಲದ ಐದು ರಾಷ್ಟ್ರಗಗಳಿಗೆ ಆವರ್ತನ ಆಧಾರದಲ್ಲಿ ಭದ್ರತಾ ಮಂಡಳಿ ಸದಸ್ಯರಾಗಲು ಅವಕಾಶ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಮಾಧ್ಯಮಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಅವರು ರೀತಿಯಾಗಿ ಉತ್ತರಿಸಿದ್ದಾರೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ 5 ಕಾಯಂ ರಾಷ್ಟ್ರಗಳ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ‘ಜಗತ್ತು 5 ರಾಷ್ಟ್ರಗಳಿಗಿಂತ ವಿಶಾಲವಾಗಿದೆ’ ಎಂದು ನುಡಿದಿದ್ದಾರೆ.
‘ಭಾರತದಂಥ ರಾಷ್ಟ್ರಕ್ಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಕಾಯಂ ಸ್ಥಾನ ದೊರಕಿದರೆ ನಮಗೆ ಹೆಮ್ಮೆಯಾಗುತ್ತದೆ. ನಿಮಗೆ ತಿಳಿದಿರುವ ಹಾಗೆ ಜಗತ್ತು 5 ರಾಷ್ಟ್ರಗಳಿಂದ ವಿಶಾಲವಾಗಿದೆ’ ಎಂದು ಹೇಳಿದ್ದಾರೆ.
‘ಅಮೆರಿಕ, ಯುಕೆ, ಫ್ರಾನ್ಸ್, ಚೀನಾ ಹಾಗ ರಷ್ಯಾದ ಬಗ್ಗೆ ನಾವು ಮಾತನಾಡುತ್ತಿಲ್ಲ. ಭದ್ರತಾ ಮಂಡಳಿಯಲ್ಲಿ ಈ ಐದು ದೇಶಗಳು ಮಾತ್ರ ಇರಲು ನಾವು ಬಯಸುವುದಿಲ್ಲ’ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.