ADVERTISEMENT

ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟಗೊಂಡು ಇಬ್ಬರು ಸೇನಾಧಿಕಾರಿಗಳ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಜುಲೈ 2022, 5:00 IST
Last Updated 18 ಜುಲೈ 2022, 5:00 IST
   

ಬೆಂಗಳೂರು: ಜಮ್ಮು–ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಪೂಂಚ್ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಆಕಸ್ಮಿಕ ಗ್ರೆನೇಡ್ ಸ್ಫೋಟದಲ್ಲಿ ಸೇನಾಪಡೆಯ ಕ್ಯಾಪ್ಟನ್ ಸಹಿತ ಇಬ್ಬರು ಅಧಿಕಾರಿಗಳು ಮೃತಪಟ್ಟಿದ್ದಾರೆ.

ಮೃತಪಟ್ಟವರನ್ನು ಕ್ಯಾಪ್ಟನ್ ಆನಂದ್ ಮತ್ತು ನೇಬ್ ಸುಬೇದಾರ್ ಭಗವಾನ್ ಸಿಂಗ್ ಎಂದು ಗುರುತಿಸಲಾಗಿದೆ.

ಈ ಬಗ್ಗೆ ಸೇನಾ ವಕ್ತಾರ ಲೆ. ಕರ್ನಲ್ ದೇವೆಂದರ್ ಆನಂದ್ ಅವರು ಮಾಹಿತಿ ನೀಡಿದ್ದು, ಇಬ್ಬರೂ ಅಧಿಕಾರಿಗಳು ಗಡಿನಿಯಂತ್ರಣ ರೇಖೆಯ ಮೀಂಧರ್ ಸೆಕ್ಟರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆ ಸಂದರ್ಭದಲ್ಲಿ ಅವಘಡ ಸಂಭವಿಸಿದೆ ಎಂದು ಹೇಳಿದ್ದಾರೆ.

ADVERTISEMENT

ಗಾಯಗೊಂಡಿದ್ದ ಇಬ್ಬರು ಅಧಿಕಾರಿಗಳನ್ನು ಕೂಡಲೇ ಹೆಲಿಕಾಪ್ಟರ್ ಮೂಲಕ ಉಧಂಪುರದ ಸೇನಾ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಈ ಕುರಿತು ಸೇನೆ ತನಿಖೆಗೆ ಆದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.