ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿಯ ಗಡಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದರು.
ಶನಿವಾರ ತಡರಾತ್ರಿ ನಿರ್ದಿಷ್ಟ ಮಾಹಿತಿಯ ಮೇರೆಗೆ ಸೇನೆಯಲ್ಲಿ ಪೋರ್ಟರ್ ಆಗಿ ಕೆಲಸ ಮಾಡುತ್ತಿದ್ದ ನೌಶೇರಾದ ವ್ಯಕ್ತಿ ಮತ್ತು ಆತನ ಸಂಬಂಧಿಯನ್ನು ಸೇನೆ ಮತ್ತು ಪೊಲೀಸರ ಜಂಟಿ ತಂಡವು ಬಂಧಿಸಿದೆ ಎಂದು ಅವರು ಹೇಳಿದರು.
ಭದ್ರತಾ ಪಡೆಗಳ ನೆಲೆಗಳಪ್ರಮುಖ ಮತ್ತು ಸೂಕ್ಷ್ಮ ವಿಡಿಯೊಗಳನ್ನು ತೆಗೆದು ಗಡಿಯಾಚೆಗಿನ ಏಜೆಂಟರಿಗೆ ದುಡ್ಡಿಗೆ ಮಾರಾಟ ಮಾಡುತ್ತಿದ್ದ ಆರೋಪ ಇವರ ಮೇಲೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.