ADVERTISEMENT

ಜಮ್ಮು ಮತ್ತು ಕಾಶ್ಮೀರ: 10 ನಿಮಿಷಗಳ ಅಂತರದಲ್ಲಿ ಎರಡು ಬಾರಿ ಭೂಕಂಪನ

ಪಿಟಿಐ
Published 20 ಆಗಸ್ಟ್ 2024, 2:55 IST
Last Updated 20 ಆಗಸ್ಟ್ 2024, 2:55 IST
ಭೂಕಂಪ 
ಭೂಕಂಪ    

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಬೆಳಿಗ್ಗೆ ಎರಡು ಬಾರಿ ಭೂಕಂಪನವಾಗಿದ್ದು, ಜನರು ಭಯಭೀತರಾಗಿದ್ದಾರೆ, ತಕ್ಷಣಕ್ಕೆ ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾರಮುಲ್ಲಾದಲ್ಲಿ ಬೆಳಿಗ್ಗೆ 6.45ರ ಹೊತ್ತಿಗೆ ಮೊದಲ ಬಾರಿ ಭೂಮಿ ಕಂಪಿಸಿದ್ದು ರಿಕ್ಟರ್‌ ಮಾಪಕದಲ್ಲಿ 4.9ರಷ್ಟು ತೀವ್ರತೆ ದಾಖಲಾಗಿದೆ. ಭೂಮಿಯ 5 ಕಿಮೀ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದೆ. 

ಎರಡನೇ ಬಾರಿ ಬಾರಮುಲ್ಲಾದಲ್ಲಿಯೇ 6.52ರ ಹೊತ್ತಿಗೆ ಭೂಮಿ ಕಂಪಿಸಿದ್ದು 4.8ರಷ್ಡು ತೀವ್ರತೆ ದಾಖಲಾಗಿದೆ. ಭೂಮಿಯ10 ಕಿಮೀ ಆಳದಲ್ಲಿ ಭೂಕಂಪನ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.