ನವದೆಹಲಿ: ಪ್ರಸಕ್ತಸಾಲಿನ ರಾಷ್ಟ್ರೀಯ ಶೌರ್ಯ ಪುರಸ್ಕಾರ ಪ್ರಕಟವಾಗಿದ್ದು, ಕರ್ನಾಟಕದ ಇಬ್ಬರು ಮಕ್ಕಳಿಗೆ ಪ್ರಶಸ್ತಿ ಘೋಷಣೆಯಾಗಿದೆ.
ಕಳೆದ ಆಗಸ್ಟ್‌ನಲ್ಲಿ ರಾಜ್ಯದಲ್ಲಿ ತಲೆದೋರಿದ್ದ ಪ್ರವಾಹ ಪರಿಸ್ಥಿತಿಯಲ್ಲಿ ಆಂಬುಲೆನ್ಸ್‌ಗೆ ದಾರಿ ಬಿಡಿಸಿ, ಐವರನ್ನು ರಕ್ಷಿಸಿದ್ದ ಬಾಲಕ ವೆಂಕಟೇಶ್ ಮತ್ತು ಕೋಪೋದ್ರಿಕ್ತ ಹಸುವಿನ ದಾಳಿಯಿಂದ ಮನೆಯ ಬಳಿ ನಿಂತಿದ್ದ ಎರಡು ವರ್ಷದ ತಮ್ಮನನ್ನು ರಕ್ಷಿಸಿದ್ದ ಆರತಿ ಪುರಸ್ಕಾರಕ್ಕೆ ಆಯ್ಕೆಯಾದವರು.
ಭಾರತೀಯ ಮಕ್ಕಳ ಕಲ್ಯಾಣ ಮಂಡಳಿಯುಮಕ್ಕಳ ಸಾಹಸಕಾರ್ಯಗುರುತಿಸಿ ಶೌರ್ಯ ಪ್ರಶಸ್ತಿ ಘೋಷಿಸಿದೆ. ವೆಂಕಟೇಶ, ದೇವದುರ್ಗ ತಾಲ್ಲೂಕಿನ ಸಂಕನೂರು ಗ್ರಾಮದವರು ಮತ್ತು ಆರತಿ, ಹೊನ್ನಾವರ ತಾಲ್ಲೂಕಿನ ನವಿಲಗೋಣ ಗ್ರಾಮದವರು.
ಕರ್ನಾಟಕದ ಇಬ್ಬರೂ ಸೇರಿದಂತೆ ದೇಶದ ಒಟ್ಟು 22 ಮಕ್ಕಳಿಗೆ ಪ್ರಶಸ್ತಿ ಘೋಷಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಪ್ರಶಸ್ತಿ ಪ್ರದಾನ ಮಾಡುವ ಸಾಧ್ಯತೆ ಇದೆ ಎಂದು ಪ್ರಶಸ್ತಿ ಆಯ್ಕೆ ಸಮಿತಿ ಮುಖ್ಯಸ್ಥೆ ಗೀತಾ ಸಿದ್ಧಾರ್ಥ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.