ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭೆಯ ಎರಡು ದಿನದ ವಿಶೇಷ ಅಧಿವೇಶನವು ಜನವರಿ 27 ರಂದು ಪ್ರಾರಂಭವಾಗಲಿದ್ದು, ಈ ವೇಳೆ ಸರ್ಕಾರವು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ ಮಂಡಿಸಲಿದೆ.
ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿದ ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಪಾರ್ಥಾ ಚಟರ್ಜಿ ಅವರು ‘ಸ್ಪೀಕರ್ ಬಿಮಾನ್ ಬಂಡೋಪಾಧ್ಯಾಯ ಅವರಿಗೆ ವಿಶೇಷ ಅಧಿವೇಶನ ಕರೆಯುವಂತೆ ಪತ್ರದ ಮೂಲಕ ಮನವಿ ಮಾಡಲಾಗಿದೆ’ ಎಂದರು.
ಈ ವಿಶೇಷ ಅಧಿವೇಶನದಲ್ಲಿ ಜಿಎಸ್‌ಟಿ ಸಂಬಂಧಿತ ಸಮಸ್ಯೆಗಳ ಬಗ್ಗೆಯೂ ಚರ್ಚೆ ನಡೆಸಲಾಗುವುದು. ಕಾಂಗ್ರೆಸ್ ಮತ್ತು ಎಡಪಂಥೀಯ ಪಕ್ಷಗಳು ಜಂಟಿಯಾಗಿ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಯ ವಿರುದ್ಧ ಹೋರಾಡಲಿವೆ’ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.