ಮುಂಬೈ: ನಗರದ ಕಾಂದಿವಲಿ ಪ್ರದೇಶದಲ್ಲಿರುವ ಸಾಯಿಬಾಬಾ ದೇವಸ್ಥಾನದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಶಾರ್ಟ್ ಸರ್ಕಿಟ್‌ನಿಂದಾಗಿ ಈ ದುರಂತ ಸಂಭವಿಸಿರಬಹುದು.ದೇವಸ್ಥಾನದ ಮುಖ್ಯ ಬಾಗಿಲನ್ನು ಬಂದ್ ಮಾಡಿ ಮೂವರು ದೇವಸ್ಥಾನದ ಸಂಕೀರ್ಣದೊಳಗೆ ಮಲಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ದುರಂತದಲ್ಲಿ ಗಾಯಗೊಂಡಿದ್ದ ಮೂವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಅಷ್ಟರಲ್ಲಿ ಇಬ್ಬರು ಮೃತಪಟ್ಟಿದ್ದರು ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.