ADVERTISEMENT

ಠಾಣೆ ಆಸ್ಪತ್ರೆ ದುರಂತ: ನಾಲ್ಕು ತಿಂಗಳ ಬಳಿಕ ಇಬ್ಬರು ವೈದ್ಯರ ಅಮಾನತು

ಪಿಟಿಐ
Published 24 ಡಿಸೆಂಬರ್ 2023, 13:50 IST
Last Updated 24 ಡಿಸೆಂಬರ್ 2023, 13:50 IST
<div class="paragraphs"><p>ಅಮಾನತು</p></div>

ಅಮಾನತು

   

(ಸಾಂದರ್ಭಿಕ ಚಿತ್ರ)

ಪಿಟಿಐ

ADVERTISEMENT

ಠಾಣೆ: ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ್‌ ಆಸ್ಪತ್ರೆಯಲ್ಲಿ ಕಳೆದ ಆಗಸ್ಟ್‌ನಲ್ಲಿ 24 ತಾಸಿನಲ್ಲಿ 18 ರೋಗಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವೈದ್ಯರನ್ನು ನಗರಾಡಳಿತವು ಸೇವೆಯಿಂದ ಅಮಾನತು ಮಾಡಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದರು.

ಕರ್ತವ್ಯಲೋಪ ಎಂದು ನಿರ್ಧರಿಸಿ ಸಹಾಯಕ ವೈದ್ಯ ಮತ್ತು ಸಹ ವೈದ್ಯರೊಬ್ಬರನ್ನು ಅಮಾನತು ಮಾಡಲಾಗಿದೆ ಎಂದರು.

‘ಕಳೆದ ಆಗಸ್ಟ್‌ 12 ಮತ್ತು 13ರಂದು ದುರಂತ ನಡೆದಿದ್ದು, ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತೀವ್ರ ವಾಗ್ದಾಳಿ ನಡೆಸಿದ್ದವು. ಈ ಬೆನ್ನಲ್ಲೇ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದರು. ಸಮಿತಿಯು ಇತ್ತೀಚೆಗೆ ನಡೆದ ಚಳಿಗಾಲದ ಅಧಿವೇಶನದಲ್ಲಿ ವರದಿ ಸಲ್ಲಿಸಿತ್ತು’ ಎಂದು ಹೇಳಿದರು.

‘ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ವೈದ್ಯರು ಮತ್ತು ಹಿರಿಯ ವ್ಯವಸ್ಥಾಪಕ ಸಿಬ್ಬಂದಿಗೆ ಶೋಕಾಸ್‌ ನೋಟಿಸ್‌ ನೀಡಲಾಗಿದೆ’ ಎಂದು ಮಹಾನಗರ ಪಾಲಿಕೆ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.