ರಾಂಚಿ: ಜಾರ್ಖಂಡ್‌ನ ಪಲಾಮು ಜಿಲ್ಲೆಯಲ್ಲಿ ಬುಧವಾರ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಪಂಕಿ ಗ್ರಾಮದಲ್ಲಿ ಮಾರುಕಟ್ಟೆಯ ‘ಟೋರನ್ ಗೇಟ್’ (ಪ್ರವೇಶ ದ್ವಾರ) ಅಳವಡಿಸುವ ವಿಚಾರಕ್ಕೆ ಸಂಬಂಧಿಸಿ ಘರ್ಷಣೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಪಲಾಮು ಜಿಲ್ಲೆಯಲ್ಲಿ ಇಂಟರ್‌ನೆಟ್ ಸೇವೆಯನ್ನು ಕೆಲಕಾಲ ಸ್ಥಗಿತಗೊಳಿಸಲಾಗಿತ್ತು ಎಂದು ವರದಿಯಾಗಿದೆ.
ಪಂಕಿ ಗ್ರಾಮದಲ್ಲಿ 100ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪಲಾಮು ಎಸ್‌ಪಿ ಸಿ.ಕೆ.ಸಿನ್ಹಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.