ಮುಂಬೈ: ವಾಣಿಜ್ಯ ನಗರಿ ಮುಂಬೈಯ ಬೀದಿಯಲ್ಲಿ ದಕ್ಷಿಣಕೊರಿಯಾದ ಮಹಿಳಾ ಯೂಟ್ಯೂಬರ್ ಮೇಲೆ ನಡೆಸಿರುವ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯ ವಿಡಿಯೊ ಸಾಮಾಜಿಕ ಜಾಲಜಾಣಗಳಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಮುಂಬೈನ ಖಾರ್ ಪ್ರದೇಶದಲ್ಲಿ ಘಟನೆ ನಡೆದಿದ್ದು, ಆರೋಪಿ ಯುವತಿಯನ್ನು ಹಿಂಬಾಲಿಸುತ್ತಾ ಕಿರುಕುಳ ನೀಡಿದ್ದಾನೆ.
ಮಂಗಳವಾರ ರಾತ್ರಿ ಸುಮಾರು 8 ಗಂಟೆಗೆ ಉಪನಗರ ಖಾರ್‌ನಲ್ಲಿ ಯುವತಿ ಯೂಟ್ಯೂಬ್‌ನಲ್ಲಿ ಲೈವ್‌ಸ್ಟ್ರೀಮ್ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಆಕೆಯ ಕೈಹಿಡಿದು ಎಳೆದಾಡಲು ಯತ್ನಿಸುತ್ತಾನೆ. ಇದನ್ನು ವಿರೋಧಿಸಿ ಆಕೆ ಅಲ್ಲಿಂದ ಹೋಗುತ್ತಿದ್ದ ವೇಳೆ ಮತ್ತೆ ಸ್ನೇಹಿತನೊಂದಿಗೆ ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಲಿಫ್ಟ್ ಕೊಡುವುದಾಗಿ ಕಿರುಕುಳ ನೀಡುತ್ತಾನೆ. ಆಕೆ ಅದನ್ನು ಕೂಡ ನಿರಾಕರಿಸುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿರುವ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. 19 ಹಾಗೂ 21 ವರ್ಷದ ಆರೋಪಿಗಳನ್ನು ಬಂಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.