ಕಣ್ಣೂರು: ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಭಾನುವಾರ ತಡ ರಾತ್ರಿ ಕಣ್ಣೂರು ಜಿಲ್ಲೆಯ ಕಕ್ಕಯಂಗಡದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮನೆಯ ಒಳಗೆ ಬಾಂಬ್ ಸ್ಫೋಟಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಘಟನೆಯಲ್ಲಿ ಸಂತೋಷ್ ಮತ್ತು ಅವರ ಪತ್ನಿ ಲಸಿತಾ ಗಾಯಗೊಂಡಿದ್ದಾರೆ. ಆದರೆ ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.