ನಾರಾಯಣಪುರ: ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲೀಯರು ಇಟ್ಟಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡು ಇಬ್ಬರು ಇಂಡೋ-ಟಿಬೆಟಿಯನ್ ಬಾರ್ಡರ್ (ಐಟಿಬಿಪಿ) ಸಿಬ್ಬಂದಿ ಗಾಯಗೊಂಡಿದ್ದಾರೆ.
ಐಟಿಬಿಪಿಯ 53 ನೇ ಬೆಟಾಲಿಯನ್‌ನ ತಂಡವು ಪ್ರದೇಶದ ಹಿಡಿತ ಸಾಧಿಸುವ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಕುತುಲ್ ಗ್ರಾಮದ ಬಳಿ ಕಾಡಿನಲ್ಲಿ ಬೆಳಿಗ್ಗೆ 6.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಬ್ಬರು ಐಟಿಬಿಪಿ ಸಿಬ್ಬಂದಿ ಐಇಡಿಯೊಂದಿಗೆ ಸಂಪರ್ಕಕ್ಕೆ ಬಂದ ವೇಳೆ ಸ್ಫೋಟಗೊಂಡಿದೆ. ಗಾಯಗೊಂಡ ಸಿಬ್ಬಂದಿಯನ್ನು ಇಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಐಇಡಿ ಸ್ಫೋಟಗೊಂಡ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.