ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಜೈಶೆ–ಮೊಹಮ್ಮದ್(ಜೆಇಎಂ) ಸಂಘಟನೆಯೊಂದಿಗೆ ನಂಟು ಹೊಂದಿದ್ದ ಇಬ್ಬರು ಸಹಚರರನ್ನು ಸೋಮವಾರ ಭದ್ರತಾ ಪಡೆಗಳು ಬಂಧಿಸಿವೆ.
ಉಮರ್ ರಂಜಾನ್ ಹಾಗೂ ಜಾವೀದ್ ಅಹಮದ್ ಮಲ್ಲ ಬಂಧಿತ ಸಹಚರರು.
‘ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಸ್ಥಳೀಯ ಪೊಲೀಸರು, ಸೇನೆ ಹಾಗೂ ಭದ್ರತಾ ಪಡೆಗಳು ಜಂಟಿ ಶೋಧ ಕಾರ್ಯಾಚರಣೆ ನಡೆಸಿ ಉಗ್ರರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದು, ಜೆಇಎಂ ಕಮಾಂಡರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುತ್ತಿದ್ದರು’ ಎಂದು ಪೊಲೀಸ್ ವಕ್ತಾರರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.