ADVERTISEMENT

Anantnag Encounter: ಇಬ್ಬರು ಎಲ್‌ಇಟಿ ಉಗ್ರರನ್ನು ಸುತ್ತುವರಿದ ಭದ್ರತಾ ಪಡೆ

ಪಿಟಿಐ
Published 14 ಸೆಪ್ಟೆಂಬರ್ 2023, 4:35 IST
Last Updated 14 ಸೆಪ್ಟೆಂಬರ್ 2023, 4:35 IST
<div class="paragraphs"><p>ಅನಂತ್‌ನಾಗ್ ಜಿಲ್ಲೆಯಲ್ಲಿ ಎನ್‌ಕೌಂಟರ್</p></div>

ಅನಂತ್‌ನಾಗ್ ಜಿಲ್ಲೆಯಲ್ಲಿ ಎನ್‌ಕೌಂಟರ್

   

(ಪಿಟಿಐ ಚಿತ್ರ)

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ಮುಂದುವರಿದಿದೆ.

ADVERTISEMENT

ಭದ್ರತಾ ಪಡೆ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಲಷ್ಕರ್‌–ಇ–ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಸುತ್ತುವರಿಯಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಗುರುವಾರ ಮಾಹಿತಿ ನೀಡಿದೆ.

ಅನಂತ್‌ನಾಗ್‌ ಜಿಲ್ಲೆಯ ಗಡೋಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ಆರಂಭವಾದ ಕಾರ್ಯಾಚರಣೆ ಈಗಲೂ ಮುಂದುವರಿದಿದೆ.

ಈ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನೆಯ ಕರ್ನಲ್‌ ಮನ್‌ಪ್ರೀತ್‌ ಸಿಂಗ್‌, ಮೇಜರ್‌ ಆಶಿಶ್‌ ದೋನಕ್ ಮತ್ತು ಡಿವೈಎಸ್‌ಪಿ ಹುಮಾಯುನ್‌ ಭಟ್‌ ವೀರ ಮರಣವನ್ನಪ್ಪಿದ್ದಾರೆ.

ಸೇನೆಯಿಂದ ಸುತ್ತುವರಿಯಲ್ಪಟ್ಟಿರುವ ಇಬ್ಬರು ಎಲ್‌ಇಟಿ ಭಯೋತ್ಪಾದಕರಲ್ಲಿ ಉಗ್ರ ಉಜೈರ್ ಖಾನ್ ಸೇರಿದ್ದಾನೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.