ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ಪೊಲೀಸ್ ಠಾಣೆಯೊಳಗೆ ‘ರೀಲ್ಸ್’ ವಿಡಿಯೊ ಚಿತ್ರೀಕರಣ ಮಾಡಿದ ಆರೋಪದ ಮೇಲೆ ಇಬ್ಬರ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೀರಾನಗರ ಪೊಲೀಸ್ ಠಾಣೆಯಲ್ಲಿ ಆರೋಪಿಗಳು ವಿಡಿಯೊ ಚಿತ್ರೀಕರಣ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದೆ.
ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಯ ಮೇಲಿನ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ರವಿ ಪ್ರಜಾಪತ್ ಮತ್ತು ಯುವರಾಜ್ ಗುರ್ಜರ್ ಅವರನ್ನು ಠಾಣೆಗೆ ಕರೆಸಲಾಗಿತ್ತು. ಈ ವೇಳೆ ಆರೋಪಿಗಳು ‘ರೀಲ್ಸ್’ ವಿಡಿಯೊ ಮಾಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ ರಾಜೇಶ್ ದಂಡೋಟಿಯಾ ತಿಳಿಸಿದ್ದಾರೆ.
ದೂರುದಾರರನ್ನು ಹೊಡೆಯಲು ಬಳಸಿದ್ದ ಬ್ಯಾಟ್ ಅನ್ನು ಠಾಣೆ ತರುವಂತೆ ಆರೋಪಿಗಳಿಗೆ ಪೊಲೀಸರು ಸೂಚಿಸಿದ್ದರು. ಹಾಗಾಗಿ ಬ್ಯಾಟ್‌ನೊಂದಿಗೆ ಠಾಣೆಗೆ ಬಂದ ಆರೋಪಿಗಳು ಪೊಲೀಸ್ ಸಿಬ್ಬಂದಿ ಕಾರ್ಯನಿರತರಾಗಿದ್ದ ವೇಳೆ ‘ರೀಲ್ಸ್’ ವಿಡಿಯೊ ಚಿತ್ರೀಕರಿಸಿದ್ದಾರೆ. ಬಳಿಕ ಅದನ್ನು ಸ್ನೇಹಿತರಿಗೂ ಕಳುಹಿಸಿದ್ದಾರೆ ಎಂದು ರಾಜೇಶ್ ಹೇಳಿದ್ದಾರೆ.
ಘಟನೆ ಸಂಬಂಧ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.