ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಲ್ಗಾಂ ಜಿಲ್ಲೆಯ ಹಸನ್‌ಪೋರಾ ಗ್ರಾಮದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಚರಣೆ ಆರಂಭಿಸಿದ್ದವುಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಶೋಧ ಕಾರ್ಯಾಚರಣೆ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಬಳಿಕ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.
ಎನ್‌ಕೌಂಟರ್ ನಡೆದ ಸ್ಥಳದಿಂದ ಶಸ್ತ್ರಾಸ್ತ್ರ ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ.
ಹತ್ಯೆಯಾಗಿರುವ ಉಗ್ರರು ಯಾವ ಭಯೋತ್ಪಾದನಾ ಸಂಘಟನೆಗೆ ಸೇರಿದವರು ಎಂಬುದನ್ನು ಪತ್ತೆ ಹಚ್ಚಲಾಗುತ್ತಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.