ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆ ಜೊತೆಗಿನ ಗುಂಡಿನ ಕಾಳಗದಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಜ್‌ಬೆಹಾರಾದ ಶಿಟಿಪೊರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆ ಸಿಬ್ಬಂದಿ ಪ್ರದೇಶವನ್ನು ಸುತ್ತುವರಿದು ಕಾರ್ಯಾಚರಣೆ ನಡೆಸಿತ್ತು.
ಭದ್ರತಾ ಪಡೆ ಸಿಬ್ಬಂದಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಭಯೋತ್ಪಾದಕರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ಸಂದರ್ಭ ಭದ್ರತಾ ಪಡೆ ನಡೆಸಿದ ಪ್ರತಿ ದಾಳಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹತ್ಯೆಯಾದ ಉಗ್ರರು ಯಾವ ಭಯೋತ್ಪಾದಕ ಸಂಘಟನೆಗೆ ಸೇರಿದವರು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.