ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶನಿವಾರ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ. ಘಟನೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಮಗದೋರ್ವ ಸೈನಿಕ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಶೋಪಿಯಾನ್‌ನ ವಾಂಗಮ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಶನಿವಾರ ಸಂಜೆಯ ವೇಳೆಗೆ ಶೋಧ ಕಾರ್ಯವನ್ನು ಪ್ರಾರಂಭಿಸಿತ್ತು.
ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿರುವ ವೇಳೆಗೆ ಉಗ್ರರು ಗುಂಡು ಹಾರಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಕ್ಷಣವೇ ಭದ್ರತಾ ಪಡೆಯು ತಿರುಗೇಟು ನೀಡಿದ್ದು, ಬಳಿಕ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ.
ಇದನ್ನೂ ಓದಿ:ಮ್ಯಾನ್ಮಾರ್ನಲ್ಲಿ ಗುಂಟೇಟು–ಭಾರತಕ್ಕೆ ಬಂದ ಮೂವರು
ಈ ನಡುವೆ ಕಾರ್ಯಾಚರಣೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಮಗದೋರ್ವ ಸೈನಿಕ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗಾಯಗೊಂಡ ಸೈನಿಕನನ್ನು ಸೇನೆಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ಒದಗಿಸಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಲಾಗಿದೆ.
ಏತನ್ಮಧ್ಯೆ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.