ADVERTISEMENT

ಜಮ್ಮು–ಕಾಶ್ಮೀರ ಚುನಾವಣೆ: ಬಿಜೆಪಿ ತ್ಯಜಿಸಿದ ಇಬ್ಬರು ನಾಯಕರು

ಪಿಟಿಐ
Published 31 ಆಗಸ್ಟ್ 2024, 14:24 IST
Last Updated 31 ಆಗಸ್ಟ್ 2024, 14:24 IST
<div class="paragraphs"><p>ಬಿಜೆಪಿ</p></div>

ಬಿಜೆಪಿ

   

–ರಾಯಿಟರ್ಸ್ ಚಿತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ ತಮ್ಮ ಕ್ಷೇತ್ರಗಳಲ್ಲಿನ ಅಭ್ಯರ್ಥಿಗಳ ಆಯ್ಕೆ ಕುರಿತು ಅಸಮಾಧಾನ ವ್ಯಕ್ತಪಡಿಸಿ ಜಿಲ್ಲಾ ಘಟಕದ ಅಧ್ಯಕ್ಷರೂ ಸೇರಿದಂತೆ ಇಬ್ಬರು ಬಿಜೆಪಿ ನಾಯಕರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ.

ADVERTISEMENT

ಚುನಾವಣೆಗೆ ಆಗಸ್ಟ್‌ 26ರಂದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಕೇಂದ್ರಾಡಳಿತ ಪ್ರದೇಶದ ಕೇಸರಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿದ್ದು, ಜಮ್ಮು ಪ್ರದೇಶದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆಗಳು ನಡೆದಿವೆ.

ಈ ಪರಿಸ್ಥಿತಿ ನಿಯಂತ್ರಿಸಲು ಮತ್ತು ನಾಯಕರ ಅತೃಪ್ತಿಯನ್ನು ಶಮನಗೊಳಿಸಲು ಬಿಜೆಪಿ ಹೈಕಮಾಂಡ್‌ ಕೇಂದ್ರ ಸಚಿವರು ಸೇರಿದಂತೆ ಹಿರಿಯ ನಾಯಕರನ್ನು ಕಳುಹಿಸಲು ಸಜ್ಜಾಗಿದೆ ಎಂದು ಮೂಲಗಳು ತಿಳಿಸಿವೆ.

‘ಸುಮಾರು 42 ವರ್ಷಗಳ ಕಾಲ ಪಕ್ಷವನ್ನು ಸಂಘಟಿಸಿದ್ದೇನೆ. ಆದರೆ ದಶಕಗಳಿಂದಲೂ ನಮ್ಮ ಪಕ್ಷದ ಸಿದ್ಧಾಂತವನ್ನು ತೀವ್ರವಾಗಿ ವಿರೋಧಿಸಿದ್ದ, ನ್ಯಾಷನಲ್‌ ಕಾನ್ಫರೆನ್ಸ್‌ (ಎನ್‌.ಸಿ) ಪಕ್ಷದಿಂದ ಬಂದಿರುವ ಮಾಜಿ ಸಚಿವ ಸುರ್ಜಿತ್‌ ಸಿಂಗ್‌ ಸ್ಲಾಥಿಯಾ ಅವರನ್ನು ಸಾಂಬಾ ಕ್ಷೇತ್ರದಿಂದ ಬಿಜೆಪಿ ಕಣಕ್ಕಿಳಿಸಿರುವುದು ತೀವ್ರ ನೋವು ತರಿಸಿದೆ. ಈ ಕಾರಣದಿಂದಾಗಿ ನಾನು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ’ ಎಂದು ಸಾಂಬಾ ಜಿಲ್ಲಾ ಘಟಕದ ಅಧ್ಯಕ್ಷ ಕಾಶ್ಮೀರ್‌ ಸಿಂಗ್‌ ಪ್ರತಿಕ್ರಿಯಿಸಿದ್ದಾರೆ.

‘ಸುರ್ಜಿತ್‌ ಸಿಂಗ್‌ ಸ್ಲಾಥಿಯಾ ಅವರನ್ನು ಬಿಟ್ಟು ಪಕ್ಷದ ಯಾವುದೇ ಹಿರಿಯ ನಾಯಕರಿಗೆ ಟಿಕೆಟ್‌ ಕೊಟ್ಟರೂ, ನಾನು ರಾಜೀನಾಮೆ ಹಿಂಪಡೆಯುತ್ತೇನೆ’ ಎಂದು ಅವರು ತಿಳಿಸಿದ್ದಾರೆ. ಜಮ್ಮು ಜಿಲ್ಲೆಯ ಬಿಜೆಪಿ ಯುವ ನಾಯಕ ಕನವ್‌ ಶರ್ಮಾ ಅವರೂ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.