ನವದೆಹಲಿ: ವಾಯವ್ಯ ದೆಹಲಿಯ ರೋಹಿಣಿ ಕೋರ್ಟ್‌ನಲ್ಲಿಪ್ರತಿಭಟನಾನಿರತ ಇಬ್ಬರು ವಕೀಲರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ವಕೀಲರು ಮತ್ತು ಪೊಲೀಸರ ನಡುವಿನ ಹಗ್ಗಜಗ್ಗಾಟ ತಾರಕಕ್ಕೇರಿದ್ದು, ವಕೀಲರು ನಡೆಸುತ್ತಿರುವ ಪ್ರತಿಭಟನೆ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ.
ವಕೀಲನೊಬ್ಬಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗಇತರರು ಒಂದು ತಡೆದಿದ್ದಾರೆ ಎಂದುಪೊಲೀಸರು ತಿಳಿಸಿದ್ದಾರೆ.
ಟಿವಿ ಚಾನಲ್‌ವೊಂದು ವರದಿ ಮಾಡಿರುವಂತೆ ಮತ್ತೋರ್ವ ವಕೀಲ ರೋಹಿಣಿ ನ್ಯಾಯಾಲಯಸಂಕೀರ್ಣಕಟ್ಟಡವನ್ನೇರಿ ಕೆಳಗೆ ಬೀಳುವುದಾಗಿ ಬೆದರಿಕೆಯೊಡ್ಡಿದ್ದ,ನ್ಯಾಯಾಧೀಶರೊಂದಿಗೆ ಮಾತನಾಡಿದ ಬಳಿಕ ಆತ ಕೆಳಗೆ ಇಳಿದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ತೀಸ್ ಹಜಾರಿ ಕೋರ್ಟ್ ಆವರಣದಲ್ಲಿ ನಡೆದ ಗಲಾಟೆಯ ಬಳಿಕ ಕೆಲಸ ಕಾರ್ಯಗಳನ್ನು ಬದಿಗೊತ್ತಿರುವ ವಕೀಲರು ಪ್ರತಿಭಟನೆ ಕೈಗೊಂಡಿದ್ದಾರೆ.
ನಮ್ಮವರ ಮೇಲೆ ಯಾವ ಪೊಲೀಸ್ ಅಧಿಕಾರಿಗಳು ಫೈರಿಂಗ್ ಮತ್ತು ಲಾಟಿಚಾರ್ಜ್ ಮಾಡಿದರೋ ಅವರ ವಿರುದ್ಧದ ಹೋರಾಟ ನಮ್ಮದು. ಅವರನ್ನು ಬಂಧಿಸುವವರೆಗೂ ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ ಎಂದು ಪ್ರತಿಭಟನಾ ನಿರತ ವಕೀಲರು ಹೇಳುತ್ತಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.