ನವದೆಹಲಿ: ಲಡಾಖ್ ಹಾಗೂ ಕಾಶ್ಮೀರದ ಕಿಸ್ತವಾರದಲ್ಲಿ ಮಂಗಳವಾರ ಬೆಳಗ್ಗೆ ರಿಕ್ಟರ್ ಮಾಪಕದಲ್ಲಿ 4.2 ರಷ್ಟು ತೀವ್ರತೆ ದಾಖಲಾಗಿದೆ.
ಕಾರ್ಗಿಲ್ ಗಡಿಯಲ್ಲಿ ಭೂಕಂಪದ ಕೇಂದ್ರ ಬಿಂದು ದಾಖಲಾಗಿದೆ. ಈ ಪ್ರಾಕೃತಿಕ ವಿದ್ಯಮಾನ, ಬೆಳಗ್ಗೆ 4.3 ಗಂಟೆಗೆ 5 ಕಿ.ಮೀ. ಆಳದಲ್ಲಿ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಸಂಸ್ಥೆ ತಿಳಿಸಿದೆ.
ಕಳೆದ ಏಪ್ರಿಲ್‌ನಿಂದ ಲಡಾಖ್ ಗಡಿ, ಕಾಗಿರ್ಲ್ ಸೇರಿದಂತೆ ದೆಹಲಿಯಲ್ಲಿ ಹಲವು ಬಾರಿ ಲಘು ಭೂಕಂಪ ಸಂಭವಿಸಿದೆ ಎಂದು ಸಂಸ್ಥೆ ತಿಳಿಸಿದೆ. ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.