ನವದೆಹಲಿ: ಉತ್ತರಪ್ರದೇಶ, ಉತ್ತರಾಖಂಡ ಹಾಗೂ ಅಸ್ಸಾಂ ರಾಜ್ಯಗಳಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಎರಡು ಪ್ರತ್ಯೇಕ ಅವಘಡಗಳಲ್ಲಿ 8 ಜನರು ಮೃತಪಟ್ಟು 12 ಜನರು ಗಾಯಗೊಂಡಿದ್ದಾರೆ.
ಉತ್ತರಪ್ರದೇಶದ ಕಾಸ್ಗಂಜ್‌ನಲ್ಲಿರುವ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಣ್ಣು ತೆಗೆಯುವಾಗ ದಿಬ್ಬ ಕುಸಿದು 4 ಮಹಿಳೆಯರು ಸಾವನ್ನಪ್ಪಿದ್ದು 9 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಅಸ್ಸಾಂ ಘಟನೆ...
ರಾಜ್ಯದ ಟಿನ್ಸುಕಿಯಾ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಮೋರಿಗೆ ಕಾರು ಬಿದ್ದ ಪರಿಣಾಮ ಐದು ವರ್ಷದ ಮಗು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಬೆಳಗ್ಗೆ ದಿಬ್ರುಗಢ್ ಬೈಪಾಸ್ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮೋರಿಗೆ ಕಾರು ಬಿದ್ದ ಪರಿಣಾಮ ಈ ಅಪಘಾತ ಸಂಭವಿಸಿದೆ. ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
6 ಸಾವು...
ಡೆಹ್ರಾಡೂನ್: ಉತ್ತರಾಖಂಡ ರಾಜ್ಯದ ರಾಜಧಾನಿ ಡೆಹ್ರಾಡೂನ್ ಸಮೀಪ ಕಾರು ಮತ್ತು ಟ್ರಕ್ ನಡುವಿನ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದು ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರಲ್ಲಿ ಮೂವರು ಪುರುಷರು ಮತ್ತು ಮೂವರು ಮಹಿಳೆಯರು ಸೇರಿದ್ದಾರೆ. ಗಾಯಗೊಂಡವರನ್ನು ಇಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಬೆಳಗ್ಗೆ 1.30ರ ಸುಮಾರಿಗೆ ಈ ಘಟನೆ ನಡೆದಿದೆ. ಅಪಘಾತದ ನಿಖರವಾದ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.