ADVERTISEMENT

ರೈತರ ಸಮಸ್ಯೆ; ಭಾರತದೊಂದಿಗೆ ಚರ್ಚಿಸಿ: ಅಮೆರಿಕ ಕಾರ್ಯದರ್ಶಿಗೆ ಸೆನಟರ್‌ಗಳ ಪತ್ರ

ಪಿಟಿಐ
Published 19 ಮಾರ್ಚ್ 2021, 6:32 IST
Last Updated 19 ಮಾರ್ಚ್ 2021, 6:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ವಾಷಿಂಗ್ಟನ್‌: ಭಾರತದಲ್ಲಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನುಮತ್ತು ಪತ್ರಕರ್ತರನ್ನು ಅಲ್ಲಿನ ಸರ್ಕಾರ ನಡೆಸಿಕೊಳ್ಳುತ್ತಿರುವ ರೀತಿಯ ಕುರಿತು ಭಾರತದ ನಾಯಕರೊಂದಿಗಿನ ಚರ್ಚೆಯ ವೇಳೆ ಪ್ರಸ್ತಾಪಿಸುವಂತೆ ಡೆಮಾಕ್ರಟಿಕ್ ಪಕ್ಷದ ಇಬ್ಬರು ಪ್ರಮುಖ ಸೆನಟರ್‌ಗಳು ಅಮೆರಿಕದ ಕಾರ್ಯದರ್ಶಿ ಆಂಟೊನಿ ಬ್ಲಿಂಕನ್‌ಗೆ ಪತ್ರ ಬರೆದಿದ್ದಾರೆ.

ಸೆನಟ್‌ನ ವಿದೇಶಾಂಗ ವ್ಯವಹಾರಗಳ ಸಮಿತಿಯ ಅಧ್ಯಕ್ಷ ಬಾಬ್‌ ಮೆನೆಂಡೆಜ್‌ ಮತ್ತು ಸೆನಟ್‌ನ ಪ್ರಮುಖ ನಾಯಕ ಚುಕ್‌ ಸ್ಕಮರ್‌ ಅವರು ಈ ಕುರಿತು ಪತ್ರಬರೆದಿದ್ದಾರೆ. ಜೋ ಬೈಡನ್ ಆಡಳಿತವು ಭಾರತದ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಚರ್ಚೆ ನಡೆಸುವ ವೇಳೆ, ಅಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ನಡೆಸಿಕೊಳ್ಳುತ್ತಿರುವ ಕುರಿತು ಚರ್ಚೆ ನಡೆಸುವಂತೆ ಬರೆದಿದ್ದಾರೆ.

ಮೂರು ಕೃಷಿ ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಪಡಿಸಬೇಕೆಂದು ಒತ್ತಾಯಿಸಿ ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರಪ್ರದೇಶದ ರೈತರು ಟಿಕ್ರಿ, ಸಿಂಗು ಮತ್ತು ಗಾಜಿಪುರ ಸೇರಿದಂತೆ ದೆಹಲಿಯ ಗಡಿ ಕೇಂದ್ರಗಳಲ್ಲಿ ನವೆಂಬರ್‌ 28ರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.