ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಬುಧವಾರ ರಾತ್ರಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಎನ್ಕೌಂಟರ್ಗೆ ಬಲಿಯಾಗಿದ್ದಾರೆಎಂದು ಪೊಲೀಸರು ತಿಳಿಸಿದ್ದಾರೆ.
ರೆಡ್ವಾನಿ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆಯ ವೇಳೆ ಉಗ್ರರು ಗುಂಡು ಹಾರಿಸಿದರು. ಈ ವೇಳೆ ಎನ್ಕೌಂಟರ್ ಭುಗಿಲೆದ್ದಿದೆ. ಗುರುವಾರ ಮುಂಜಾನೆ ವರೆಗೂ ಮುಂದುವರಿದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರಬಲಿಯಾಗಿದೆ ಎಂದು ಪೊಲೀಸ್ ವಕ್ತಾರ ತಿಳಿಸಿದ್ದಾರೆ.
ಇವರು ಯಾವ ಭಯೋತ್ಪಾದನಾ ಸಂಘಟನೆಗೆ ಸೇರಿದ ಉಗ್ರರು ಎಂಬುದು ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ.
ನಿನ್ನೆ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಉಗ್ರನೊಬ್ಬ ಬಲಿಯಾಗಿದ್ದನು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.