ಭೋಪಾಲ್: ಮಧ್ಯಪ್ರದೇಶದ ಮೊರೆನಾ ನಗರದಲ್ಲಿ ತಡರಾತ್ರಿ ಮೂರು ಮನೆಗಳಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಗರದ ರಾಥೋಡ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.
ಈ ಅವಘಡದಲ್ಲಿ ಇನ್ನೂ ಅನೇಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರುವ ಬಗ್ಗೆ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.
ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ವಿಧಿವಿಜ್ಞಾನ ತಂಡವೂ ಭೇಟಿ ನೀಡಿ ಪರಿಶೀಲಿಸುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.