ADVERTISEMENT

ಕಂಗನಾ ಮೇಲೆ ಹಲ್ಲೆ ವಿಚಾರ: ಬಿಜೆಪಿ ಸಂಸದ ರಾವತ್‌ಗೆ ಬೆದರಿಕೆಯೊಡ್ಡಿದ ಅಪರಿಚಿತರು

ಪಿಟಿಐ
Published 12 ಜೂನ್ 2024, 9:48 IST
Last Updated 12 ಜೂನ್ 2024, 9:48 IST
<div class="paragraphs"><p>ಸಾಂದರ್ಭಿಕ ಚಿತ್ರ&nbsp;</p></div>

ಸಾಂದರ್ಭಿಕ ಚಿತ್ರ 

   

ಜೈಪುರ: ಉದಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಮನ್ನಾ ಲಾಲ್‌ ರಾವತ್‌ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆಯೊಡ್ಡಿದ್ದು, ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಯೂಟ್ಯೂಬ್‌ ಚಾನೆಲ್‌ವೊಂದರ ವಿಡಿಯೊದಲ್ಲಿ ಇಬ್ಬರು ವ್ಯಕ್ತಿಗಳು ರಾವತ್‌ ಅವರಿಗೆ ಬೆದರಿಕೆಯೊಡ್ಡುವ ಕಾಮೆಂಟ್‌ ಪೋಸ್ಟ್‌ ಮಾಡಿದ್ದಾರೆ ಎಂದು ಉದಯಪುರ ಪೊಲೀಸ್ ವರಿಷ್ಠಾಧಿಕಾರಿ ಯೋಗೇಶ್ ಗೋಯಲ್ ಮಾಹಿತಿ ನೀಡಿದ್ದಾರೆ.

ADVERTISEMENT

ವಿಡಿಯೊವೊಂದರಲ್ಲಿ ಮಾತನಾಡಿರುವ ರಾವತ್‌, ಇತ್ತೀಚೆಗೆ ನಡೆದ ನಟಿ ಹಾಗೂ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರನೌತ್ ಅವರಿಗೆ ಸಿಐಎಸ್‌ಎಫ್ ಮಹಿಳಾ ಪೇದೆಯೊಬ್ಬರು ಕಪಾಳ ಮೋಕ್ಷ ಮಾಡಿದ್ದ ಘಟನೆಯನ್ನು ಉಲ್ಲೇಖಿಸಿದ್ದರು. ಈ ಸಂಬಂಧ ಆರೋಪಿಗಳು ಬೆದರಿಕೆಯ ಕಾಮೆಂಟ್‌ ಮಾಡಿದ್ದಾರೆ ಎಂದು ಗೋಯಲ್ ಹೇಳಿದ್ದಾರೆ.

‘ನಾನು ಈ ವಿಷಯವನ್ನು ಪೊಲೀಸ್ ವರಿಷ್ಠಾಧಿಕಾರಿ ಗಮನಕ್ಕೆ ತಂದಿದ್ದೇನೆ. ಸೈಬರ್‌ ಪೊಲೀಸರ ಮೂಲಕ ಆರೋಪಿಗಳನ್ನು ಪತ್ತೆ ಹಚ್ಚಿ ಸೂಕ್ತ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ’ ಎಂದು ರಾವತ್‌ ಹೇಳಿದ್ಧಾರೆ

ಚಂಡೀಗಢದಿಂದ ದೆಹಲಿಗೆ ಪ್ರಯಾಣಿಸಲು ಕಂಗನಾ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಭದ್ರತಾ ತಪಾಸಣೆ ವೇಳೆ, ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಕೌರ್ ಅವರು ಕಂಗನಾಗೆ ಕಪಾಳಮೋಕ್ಷ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.