ಮುಂಬೈ: ಶಿವಾಜಿ ಹೆಸರಿನಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಠಾಕ್ರೆ ಕುಟುಂಬದ ಉದ್ಧವ್ ಪ್ರಮಾಣ ವಚನ ಸ್ವೀಕರಿಸಿದರು.
ಬಾಳ ಠಾಕ್ರೆ ಅವರು 1966ರಲ್ಲಿ ಶಿವಸೇನಾವನ್ನು ಸ್ಥಾಪಿಸಿದ ಇತಿಹಾಸವಿರುವ ಶಿವಾಜಿ ಪಾರ್ಕ್‌ನಲ್ಲಿ ನಿರ್ಮಿಸಲಾಗಿದ್ದ ಬರೋಬ್ಬರಿ 9 ಸಾವಿರ ಚದರ ಅಡಿಯ ವೇದಿಕೆಯಲ್ಲಿ ಉದ್ಧವ್ ಠಾಕ್ರೆ ಪ್ರಮಾಣ ವಚನ ಸ್ವೀಕರಿಸಿದರು. ಶಿವಸೇನಾ, ಎನ್‌ಸಿಪಿ, ಕಾಂಗ್ರೆಸ್ ಮುಖಂಡರು ಹಾಗೂ ಅಸಂಖ್ಯಾತ ಜನರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.
ಉದ್ಧವ್ ಅವರು ಮಹಾರಾಷ್ಟ್ರದ ಚುಕ್ಕಾಣಿ ಹಿಡಿಯುವ ಮೂಲಕ ಚುನಾವಣಾ ಫಲಿತಾಂಶ ನಂತರ ಉಂಟಾಗಿದ್ದ ರಾಜಕೀಯ ಅಸ್ಥಿರತೆಯನ್ನು ಕೊನೆಗೊಳಿಸಿದರು.
ಈ ಹೊಸ ಮೈತ್ರಿ ಸರ್ಕಾರದಲ್ಲಿ ಎನ್‌ಸಿಪಿ ನಾಯಕ ಶರದ್ ಪವಾರ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕರೊಬ್ಬರು ಸ್ವೀಕರ್ ಸ್ಥಾನ ಪಡೆಯಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.