ADVERTISEMENT

ಸನಾತನ ಧರ್ಮವನ್ನು ದೂರವಿರಿಸಲು ಡಿಎಂಕೆ ಸ್ಥಾಪನೆ: ಉದಯನಿಧಿ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2023, 16:36 IST
Last Updated 20 ಸೆಪ್ಟೆಂಬರ್ 2023, 16:36 IST
ಉದಯನಿಧಿ ಸ್ಟಾಲಿನ್‌
ಉದಯನಿಧಿ ಸ್ಟಾಲಿನ್‌   

ಚೆನ್ನೈ: ಸನಾತನ ಧರ್ಮವನ್ನು ದೂರವಿರಿಸಲು ಡಿಎಂಕೆ ಸ್ಥಾಪಿಸಲಾಗಿದೆ ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ ಬುಧವಾರ ಪುನರುಚ್ಚರಿಸಿದ್ದಾರೆ.

ನೂತನ ಸಂಸತ್‌ ಭವನದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದಿರುವುದು ಸನಾತನ ಧರ್ಮದ ತತ್ವಗಳಿಗೆ ಉದಾಹರಣೆ ಎಂದಿರುವ ಅವರು, ವಿಧವೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ್ದಾರೆ ಎನ್ನುವ ಕಾರಣಕ್ಕೆ ಮುರ್ಮು ಅವರನ್ನು ಆಹ್ವಾನಿಸಿಲ್ಲ ಎಂದಿದ್ದಾರೆ.

ಮದುರೈಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸನಾತನ ಧರ್ಮದ ತತ್ವಗಳನ್ನು ಡೆಂಗಿ, ಮಲೇರಿಯಾ ಮತ್ತು ಕೋವಿಡ್‌ನಂತೆ ನಿರ್ಮೂಲನೆ ಮಾಡಬೇಕು ಎಂದು ನಾನು ಹೇಳಿರುವುದನ್ನು ಬಿಜೆಪಿಯು ತಿರುಚಿ, ನಾನು ನರಮೇಧಕ್ಕೆ ಆಹ್ವಾನ ನೀಡಿದ್ದೇನೆ ಎಂದು ಪ್ರಚಾರ ಮಾಡುತ್ತಿದೆ ಎಂದು ಹೇಳಿದ್ದಾರೆ.

ADVERTISEMENT

‘ಜನರು ನನ್ನ ತಲೆಗೆ ಬೆಲೆ ಕಟ್ಟಿದ್ದಾರೆ. ಅದಕ್ಕೆಲ್ಲ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.