ನವದೆಹಲಿ (ಪಿಟಿಐ): ‘ಪದವಿ ಪ್ರಮಾಣಪತ್ರಗಳು ಹಾಗೂ ತಾತ್ಕಾಲಿಕ ಪ್ರಮಾಣಪತ್ರಗಳ ಮೇಲೆ ವಿದ್ಯಾರ್ಥಿಗಳ ಆಧಾರ್ ಸಂಖ್ಯೆಯನ್ನು ಮುದ್ರಿಸದಂತೆ ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ಎಲ್ಲ ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದೆ.
‘ನೇಮಕಾತಿ ಅಥವಾ ಪ್ರವೇಶದ ಸಮಯದಲ್ಲಿ ದಾಖಲೆಗಳ ಪರಿಶೀಲನೆಗಾಗಿ ಹಾಗೂ ನಂತರ ಇತರ ಬಳಕೆಗಾಗಿ ಪದವಿ ಪ್ರಮಾಣಪತ್ರ ಹಾಗೂ ತಾತ್ಕಾಲಿಕ ಪ್ರಮಾಣಪತ್ರಗಳಲ್ಲಿ ವಿದ್ಯಾರ್ಥಿಗಳ ಪೂರ್ಣ ಆಧಾರ್ ಸಂಖ್ಯೆಯನ್ನು ಮುದ್ರಿಸಲು ರಾಜ್ಯ ಸರ್ಕಾರಗಳು ಪರಿಗಣಿಸುತ್ತಿವೆ’ ಎಂಬ ವರದಿ ಬಂದ ಹಿನ್ನೆಲೆಯಲ್ಲಿ ಯುಜಿಸಿಯು ಈ ನಿರ್ದೇಶನ ನೀಡಿದೆ.
‘ಪದವಿಗಳು ಮತ್ತು ತಾತ್ಕಾಲಿಕ ಪ್ರಮಾಣಪತ್ರಗಳಲ್ಲಿ ಆಧಾರ್ ಸಂಖ್ಯೆಗಳನ್ನು ಮುದ್ರಿಸಲು ಅನುಮತಿಯಿಲ್ಲ. ಉನ್ನತ ಶಿಕ್ಷಣ ಸಂಸ್ಥೆಗಳು ಯುಐಡಿಎಐನ ನಿಯಮಗಳು ಮತ್ತು ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು’ ಎಂದೂ ಅವರು ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.