ನವದೆಹಲಿ: ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ಅಹರ್ತೆಗೆ ನಡೆಸುವ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್ಇಟಿ) 2023ರ ಫೆಬ್ರವರಿ 23ರಿಂದ ಮಾರ್ಚ್ 10ರವರೆಗೆ ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಗುರುವಾರ ತಿಳಿಸಿದೆ.
ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕ ಮತ್ತು ಜೂನಿಯರ್ ರಿಸರ್ಚ್ ಫೆಲೋಶಿಪ್‌ನ ಅರ್ಹತೆಗಾಗಿ ಎನ್‌ಇಟಿ ನಡೆಸಲಾಗುತ್ತಿದೆ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಅಧ್ಯಕ್ಷ ಎಂ. ಜಗದೀಶ್ ಕುಮಾರ್ ತಿಳಿಸಿದ್ದಾರೆ.
83 ವಿಷಯಗಳಲ್ಲಿ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿ ನಡೆಯಲಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು 2022ರ ಡಿ.29 ರಿಂದ 2023 ಜನವರಿ 17ರವರೆಗೆ ಅವಕಾಶ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.