ADVERTISEMENT

ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಗೆ ಯುಜಿಸಿ ಎಚ್ಚರಿಕೆ

ಪಿಟಿಐ
Published 16 ಡಿಸೆಂಬರ್ 2023, 13:00 IST
Last Updated 16 ಡಿಸೆಂಬರ್ 2023, 13:00 IST
<div class="paragraphs"><p>ಯುಜಿಸಿ </p></div>

ಯುಜಿಸಿ

   

ನವದೆಹಲಿ: ವಿಶ್ವವಿದ್ಯಾಲಯ ಅನುದಾನ ಆಯೋಗದಿಂದ (ಯುಜಿಸಿ) ಮಾನ್ಯತೆ ಪಡೆಯದ ವಿದೇಶಿ ವಿಶ್ವವಿದ್ಯಾಲಯಗಳ ಸಹಯೋಗದಲ್ಲಿ ಪದವಿ ನೀಡುತ್ತಿರುವ ತಾಂತ್ರಿಕ ಶಿಕ್ಷಣ (ಎಜುಕೇಷನ್ ಟೆಕ್ನಾಲಜಿ) ಸಂಸ್ಥೆಗಳು ಮತ್ತು ಕಾಲೇಜುಗಳಿಗೆ ಯುಜಿಸಿ ಎಚ್ಚರಿಕೆ ನೀಡಿದೆ.

ಈ ರೀತಿ ಪ್ರಧಾನ ಮಾಡುವ ಯಾವುದೇ ಪದವಿಗಳಿಗೆ ಮಾನ್ಯತೆ ಇರುವುದಿಲ್ಲ. ಇಂಥ ಕೋರ್ಸ್‌ಗಳಿಗೆ ಸೇರ್ಪಡೆಯಾಗುವ ಮುನ್ನ ವಿದ್ಯಾರ್ಥಿಗಳು ಎಚ್ಚರದಿಂದ ಇರಬೇಕು ಎಂದು ತಿಳಿಸಿದೆ.

ADVERTISEMENT

‘ಹಲವು ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ಕಾಲೇಜುಗಳು ಯುಜಿಸಿಯಿಂದ ಮಾನ್ಯತೆ ಪಡೆಯದ ವಿದೇಶಿ ಮೂಲದ ಶಿಕ್ಷಣ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡಿರುವುದು ಮತ್ತು ವಿದೇಶಿ ಪದವಿ ಪ್ರದಾನ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂಥ ಯಾವುದೇ ಸಹಯೋಗ ಅಥವಾ ಒಪ್ಪಂದಕ್ಕೆ ಹಾಗೂ ಸಂಸ್ಥೆಗಳು ಪ್ರಧಾನ ಮಾಡುವ ಪದವಿಗಳಿಗೆ ಮಾನ್ಯತೆ ಇರುವುದಿಲ್ಲ’ ಎಂದು ಯುಜಿಸಿ ಕಾರ್ಯದರ್ಶಿ ಮನೀಶ್‌ ಜೋಶಿ ಸ್ಪಷ್ಟಪಡಿಸಿದರು.

ತಾಂತ್ರಿಕ ಶಿಕ್ಷಣ ಸಂಸ್ಥೆಗಳು ಆನ್‌ಲೈನ್‌ ಮೂಲಕ ಪದವಿ, ಡಿಪ್ಲೊಮಾ ತರಬೇತಿ ನೀಡುವುದಾಗಿ ದಿನಪತ್ರಿಕೆ, ಟಿ.ವಿ ಅಥವಾ ಸಾಮಾಜಿಕ ಜಾಲತಾಣಗಳ ಮೂಲಕ ಜಾಹೀರಾತು ನೀಡುತ್ತಿರುವುದೂ ಗಮನಕ್ಕೆ ಬಂದಿದೆ. ಇಂಥ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.