ADVERTISEMENT

ಭಾರತೀಯ ಹೈಕಮಿಷನ್‌ಗೆ ಸೂಕ್ತ ಭದ್ರತೆ: ಬ್ರಿಟನ್ ಭದ್ರತಾ ಸಚಿವ

ಪಿಟಿಐ
Published 13 ಆಗಸ್ಟ್ 2023, 6:02 IST
Last Updated 13 ಆಗಸ್ಟ್ 2023, 6:02 IST
   

ನವದೆಹಲಿ: ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ಗೆ ಭದ್ರತೆ ಒದಗಿಸಲು ಬೇಕಾದ ಎಲ್ಲ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಬ್ರಿಟನ್‌ ಭದ್ರತಾ ಸಚಿವ ಟಾಮ್ ಟುಗೆಂಧಟ್ ಭರವಸೆ ನೀಡಿದ್ದಾರೆ.

ಭಾರತೀಯ ಹೈಕಮಿಷನ್ ಮತ್ತು ಅದರ ಸಿಬ್ಬಂದಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬ್ರಿಟನ್ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಅವರು ಹೇಳಿದರು.

ಬ್ರಿಟನ್‌ನಲ್ಲಿ ಖಾಲಿಸ್ತಾನ ಪರ ಹೋರಾಟಗಾರರ ಚಟುವಟಿಕೆಗಳು ಹೆಚ್ಚಾಗಿರುವ ಬೆನ್ನಲ್ಲೇ ಭಾರತದ ಕಳವಳದ ಕುರಿತು ಅವರು ಪ್ರತಿಕ್ರಿಯಿಸಿದರು.

ADVERTISEMENT

ಇದು ಭಾರತೀಯರ ಸಮಸ್ಯೆಯಲ್ಲ. ತೀವ್ರಗಾಮಿಗೊಳಿಸುವ ಯಾವುದೇ ಪ್ರಯತ್ನವು ಬ್ರಿಟನ್‌ನ ಸಮಸ್ಯೆಯಾಗಿದೆ. ಹಾಗಾಗಿ ಅಂತಹ ಸಮಸ್ಯೆಗಳನ್ನು ಬ್ರಿಟನ್ ಸರ್ಕಾರವೇ ಸಮರ್ಥವಾಗಿ ನಿಭಾಯಿಸಲಿದೆ ಎಂದು ಸ್ಪಷ್ಟವಾಗಿ ಹೇಳಬಯಸುತ್ತೇನೆ ಎಂದು ಹೇಳಿದ್ದಾರೆ.

ಕಳೆದ ಮಾರ್ಚ್ ತಿಂಗಳಲ್ಲಿ ಖಾಲಿಸ್ತಾನ ಪರ ಹೋರಾಟಗಾರರು, ಭಾರತೀಯ ಹೈಕಮಿಷನ್‌ಗೆ ದಾಳಿ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.