ADVERTISEMENT

ಉತ್ತರಾಖಂಡ: ನಿರ್ಮಾಣ ಹಂತದ ಸುರಂಗ ಕುಸಿತ, 40 ಕಾರ್ಮಿಕರು ಸಿಲುಕಿರುವ ಶಂಕೆ

ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗ ಕುಸಿತ– 40 ಕಾರ್ಮಿಕರು ಸಿಲುಕಿರುವ ಶಂಕೆ–ಮುಂದುವರೆದ ರಕ್ಷಣಾ ಕಾರ್ಯಾಚರಣೆ.

ಪಿಟಿಐ
Published 12 ನವೆಂಬರ್ 2023, 7:12 IST
Last Updated 12 ನವೆಂಬರ್ 2023, 7:12 IST
<div class="paragraphs"><p>ನಿರ್ಮಾಣ ಹಂತದ ಸುರಂಗ ಕುಸಿತ</p></div>

ನಿರ್ಮಾಣ ಹಂತದ ಸುರಂಗ ಕುಸಿತ

   

ಚಿತ್ರ ಕೃಪೆ–ಪಿಟಿಐ

ಉತ್ತರಕಾಶಿ(ಉತ್ತರಾಖಂಡ): ಉತ್ತರಕಾಶಿಯ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಂದು ಭಾಗ ಇಂದು ಬೆಳಗ್ಗೆ ಕುಸಿದಿದೆ. ಸುಮಾರು 40 ಕಾರ್ಮಿಕರು ಒಳಗೆ ಸಿಲುಕಿರುವ ಮಾಹಿತಿ ಲಭ್ಯವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ಉತ್ತರಕಾಶಿ ಜಿಲ್ಲೆಯ ಬ್ರಹ್ಮಖಾಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಲ್ಕ್ಯಾರಾ ಮತ್ತು ದಾಂಡಲ್‌ಗಾಂವ್ ನಡುವೆ ನಿರ್ಮಿಸಲಾಗುತ್ತಿರುವ ನಾಲ್ಕೂವರೆ ಕಿಲೋ ಮೀಟರ್ ಉದ್ದದ ಸುರಂಗದ 150 ಮೀಟರ್‌ನಷ್ಟು ಭಾಗ ಇಂದು ಮುಂಜಾನೆ 4 ಗಂಟೆಗೆ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಉತ್ತರಕಾಶಿ ಪೊಲೀಸ್ ವರಿಷ್ಠಾಧಿಕಾರಿ ಅರ್ಪಣ್ ಯದುವಂಶಿ ಅವರು ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ಪಡೆ, ಅಗ್ನಿಶಾಮಕ ದಳ ಮತ್ತು ಸುರಂಗ ನಿರ್ಮಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ (ಎನ್‌ಎಚ್‌ಐಡಿಸಿಎಲ್) ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ವರದಿಗಳ ಪ್ರಕಾರ, 40 ಕಾರ್ಮಿಕರು ಸಿಕ್ಕಿಬಿದ್ದಿರುವ ಶಂಕೆ ಇದೆ. ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆಮ್ಲಜನಕದ ಕೊರತೆಯಿಂದ ಯಾವುದೇ ಹಾನಿಯಾಗದಂತೆ ಮೊದಲು ಹೆಚ್ಚುವರಿ ಆಮ್ಲಜನಕಕ್ಕಾಗಿ ಪೈಪ್‌ಗಳನ್ನು ಹಾಕಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.