ADVERTISEMENT

Wayanad: ಸಾರ್ವಜನಿಕ ಸ್ಮಶಾನಗಳಲ್ಲಿ ಗುರುತು ಪತ್ತೆಯಾಗದ ಮೃತದೇಹಗಳ ಅಂತ್ಯಕ್ರಿಯೆ

ಪಿಟಿಐ
Published 2 ಆಗಸ್ಟ್ 2024, 12:45 IST
Last Updated 2 ಆಗಸ್ಟ್ 2024, 12:45 IST
<div class="paragraphs"><p>ವಯನಾಡ್ ದುರಂತ ಭೂಮಿಯ ದೃಶ್ಯ</p></div>

ವಯನಾಡ್ ದುರಂತ ಭೂಮಿಯ ದೃಶ್ಯ

   

ರಾಯಿಟರ್ಸ್ ಚಿತ್ರ

ವಯನಾಡ್: ಕೇರಳದ ವಯನಾಡ್‌ನಲ್ಲಿ ಭೂಕುಸಿತದಲ್ಲಿ ಮೃತಪಟ್ಟು, ಗುರುತು ಪತ್ತೆಯಾಗದ ದೇಹಗಳನ್ನು ಸಾರ್ವಜನಿಕ ಸ್ಮಶಾನಗಳಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ADVERTISEMENT

ಕಲ್ಪೆಟ್ಟ, ವೈತಿರಿ, ಮುಟ್ಟಿಲ್‌, ಕನಿಯಾಂಬಟ್ಟ, ಪಡಿಞಾರತ್ತರ, ತೊಂಡರ್ನಾಡ್‌, ಎಡವಗ ಹಾಗೂ ಮುಲ್ಲನ್‌ಕೊಲ್ಲಿ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯ ಸ್ಮಶಾನಗಳಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಮೇಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಗುರುತು ಪತ್ತೆಯಾಗದ 74 ಮೃತದೇಹಗಳನ್ನು ಇರಿಸಲಾಗಿದೆ. ಅಗತ್ಯ ಪ್ರಕ್ರಿಯೆಗಳು ಮುಗಿದ ಬಳಿಕ ದೇಹಗಳ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ನೋಂದಣಿ ಇಲಾಖೆಯ ಇನ್‌ಸ್ಪೆಕ್ಟರ್‌ ಜನರಲ್‌ ಶ್ರೀಧನ್ಯ ಸುರೇಶ್‌ ಅವರನ್ನು ಮೃತದೇಹಗಳ ನೋಂದಣಿ ಹಾಗೂ ಅಂತಿಮ ಸಂಸ್ಕಾರದ ಮೇಲುಸ್ತುವಾರಿ ನೋಡಿಕೊಳ್ಳಲು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಭೂಕುಸಿತ ಘಟನೆಯಲ್ಲಿ 200ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.