ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನ 2019–20 ಮಧ್ಯಂತರ ಬಜೆಟ್ ಮಂಡನೆಗೆ ವಿತ್ತ ಸಚಿವ ಪಿಯೂಷ್ ಗೋಯಲ್ ಸಿದ್ಧರಾಗಿದ್ದಾರೆ. ಈಗಾಗಲೇ ಬಜೆಟ್ ಪ್ರತಿಗಳು ಸಂಸತ್ ಭವನ ತಲುಪಿದ್ದು, ಬೆಳಿಗ್ಗೆ 11ಕ್ಕೆ ಬಜೆಟ್ ಮಂಡನೆ ಆರಂಭವಾಗಲಿದೆ.
ಸಂಪ್ರದಾಯದಂತೆ ಬಜೆಟ್ ಮಂಡನೆಗೂ ಮುನ್ನ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ವಿತ್ತ ಸಚಿವ ಪಿಯೂಷ್ ಗೋಯಲ್ ಭೇಟಿ ಮಾಡಿದ್ದಾರೆ.
ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಶುಕ್ರವಾರ ಷೇರು ಮಾರುಕಟ್ಟೆ ಜಿಗಿತದೊಂದಿಗೆ ಶುರುವಾಗಿದೆ. ಸೆನ್‌ಸೆಕ್ಸ್ 100 ಅಂಶ ಏರಿಕೆಯಾಗಿದ್ದು, ನಿಫ್ಟಿ 10,860 ಮುಟ್ಟಿದೆ.
ಇಂದು ಮಂಡನೆಯಾಗಲಿರುವ ಬಜೆಟ್ ಮುಖ್ಯವಾಗಿ ಕೃಷಿ ಕ್ಷೇತ್ರದಲ್ಲಿ ಹೂಡಿಕೆ, ಆರೋಗ್ಯ ವಲಯ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಲಾಭಕಾರಿಯಾಗಿರಲಿದೆ ಎಂದು ನಿರೀಕ್ಷಿಸಲಾಗಿದೆ.
ಸಂಸತ್ ಹೊರಭಾಗದಲ್ಲಿ ಬಜೆಟ್ ಪ್ರತಿಗಳನ್ನು ಇಡಲಾಗಿರುವ ಚೀಲಗಳ ಭದ್ರತಾ ತಪಾಸಣೆ ನಡೆಸಲಾಗುತ್ತಿದೆ. ಪಿಯೂಷ್ ಗೋಯಲ್ ರಾಷ್ಟ್ರಪತಿ ಭವನದಿಂದ ಸಂಸತ್ತಿಗೆ ಬಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.