ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ಬೆಟ್ಟ ಕುರುಬ ಜನಾಂಗ ಸೇರಿದಂತೆ ಒಟ್ಟು 12 ಜಾತಿಗಳನ್ನು ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರ್ಪಡೆಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ಈ ಸಂಬಂಧ ಕರ್ನಾಟಕ ಸರ್ಕಾರ ಮಾಡಿದ್ದ ಶಿಫಾರಸ್ಸನ್ನು ಕೇಂದ್ರ ಸಚಿವ ಸಂಪುಟ ಇದೀಗ ಅನುಮೋದಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಕರ್ನಾಟಕದ ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳ ಅಂಚಿನಲ್ಲಿ ಬೆಟ್ಟ ಕುರುಬ ಜನಾಂಗ ನೆಲೆಸಿತ್ತು. ಕಾರಣಾಂತರಗಳಿಂದ ಈ ಜನಾಂಗದವರನ್ನು ಒಕ್ಕಲೆಬ್ಬಿಸಲಾಗಿತ್ತು. ಪರಿಶಿಷ್ಟ ವರ್ಗಕ್ಕೆ ಸೇರ್ಪಡೆಗೊಳಿಸುವಂತೆ ಈ ಜನಾಂಗದವರು ಕಳೆದ 30 ವರ್ಷಗಳಿಂದ ಹೋರಾಡುತ್ತಿದ್ದರು ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.