ನವದೆಹಲಿ: ದೆಹಲಿಯಲ್ಲಿ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣ ಸಂಬಂಧ ಹೊರಡಿಸಿರುವ ಸುಗ್ರೀವಾಜ್ಞೆಗೆ ಕಾಯ್ದೆಯ ರೂಪವನ್ನು ನೀಡಲು ಮಂಡಿಸಲಿರುವ ಮಸೂದೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಮಂಗಳವಾರ ಅನುಮೋದನೆ ನೀಡಿದೆ. ಸದ್ಯ ನಡೆಯುತ್ತಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿಯೇ ಮಸೂದೆ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.